3-4 ದಿನಗಳ ಕಾಲ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಉತ್ತಮ ಮಳೆ…….

ತಮಿಳುನಾಡಿನಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪ್ರಭಾವದಿಂದ ದಕ್ಷಿಣ ಕರ್ನಾಟಕ ಭಾಗದಲ್ಲಿ ಮುಂಗಾರು ಚುರುಕಾಗಿದ್ದು, ಮುಂದಿನ ಎರಡು ಅಥವಾ ಮೂರು ದಿನಗಳ ಕಾಲ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಉಳಿದಂತೆ ಮಲೆನಾಡು ಮತ್ತು ಕರಾವಳಿ ಜಿಲ್ಲೆಯಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಭಾರೀ ಮಳೆ ಮತ್ತು ಪ್ರವಾಹದಿಂದ ತತ್ತರಿಸಿದ್ದ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಮುಂಗಾರು ದುರ್ಬಲವಾಗಿದ್ದು, ಉಳಿದಂತೆ ರಾಜ್ಯಾದ್ಯಂತ ಸಾಧಾರಣ ಮಳೆಯಾಗಲಿದೆ. ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ಮಾಹಿತಿ ನೀಡಿದೆ.

ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಮಳೆನಾಡು ಜಿಲ್ಲೆಗಳಾದ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಕೋಲಾರ, ಮಂಡ್ಯ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ 65 ಮಿ.ಮೀ.ನಿಂದ 115 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

 

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.