ಬಹುಕೋಟಿ ವಂಚನೆ ಪ್ರಕರಣ : ಇಂದು ಐಎಂಎ ಸಂಸ್ಥೆ ಮಾಲೀಕ ಮನ್ಸೂರ್ ಖಾನ್ ವಿಚಾರಣೆ…

ಬಹುಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ದೆಹಲಿ ಏರ್ಪೋರ್ಟ್ ನಲ್ಲಿ ಬಂಧಿತನಾಗಿದ್ದ ಐಎಂಎ ಸಂಸ್ಥೆ ಮಾಲೀಕ ಮನ್ಸೂರ್ ಖಾನ್ ನನ್ನು ಬೆಂಗಳೂರಿಗೆ ಕರೆ ತರಲಾಗಿದೆ.

ಎಸ್ಐಟಿ ಮತ್ತು ಇಡಿ ಅಧಿಕಾರಿಗಳು ಮನ್ಸೂರ್ ಖಾನ್ ನನ್ನು ದೆಹಲಿಯಿಂದ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದಾರೆ. ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಯಲ್ಲಿ ವಿಚಾರಣೆ ನಡೆಸಲಾಗಿದೆ.

40,000 ಕ್ಕೂ ಅಧಿಕ ಹೂಡಿಕೆದಾರರು ದೂರು ನೀಡಿದ್ದು, ಬಹುಕೋಟಿ ರೂ. ವಂಚನೆ ಪ್ರಕರಣ ದಾಖಲಾಗಿದೆ. ಐಎಂಎಗೆ ಸೇರಿದ ಚಿನ್ನ, ಆಸ್ತಿ ಜಪ್ತಿ ಮಾಡಲಾಗಿದೆ. ದುಬೈಗೆ ತೆರಳಿದ್ದ ಮನ್ಸೂರ್ ಖಾನ್ ದೆಹಲಿಗೆ ಆಗಮಿಸಿದ ಸಂದರ್ಭದಲ್ಲಿ ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಆತನನ್ನು ಬೆಂಗಳೂರಿಗೆ ಕರೆತಂದ ಎಸ್ಐಟಿ ಮತ್ತು ಇಡಿ ಅಧಿಕಾರಿಗಳು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಬಳಿಕ ವಿಚಾರಣೆ ನಡೆಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.