ಅಡಿಲೇಡ್ ನಲ್ಲಿ ಧೋನಿ ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ – ಟೀಕಾಕಾರರ ಕಾಲೆಳೆದ MSD ಫ‍್ಯಾನ್ಸ್

ಅಡಿಲೇಡ್ ನಲ್ಲಿ ಮಂಗಳವಾರ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಭಾರತ 6 ವಿಕೆಟ್ ಭರ್ಜರಿ ಜಯ ಗಳಿಸಿತ್ತು. ಇದರೊಂದಿಗೆ 3 ಪಂದ್ಯಗಳ ಏಕದಿನ ಸರಣಿ 1-1 ರಿಂದ ಸಮಬಲಗೊಂಡಿದೆ.

ಪಂದ್ಯದಲ್ಲಿ 39ನೇ ಏಕದಿನ ಶತಕ ಬಾರಿಸಿ ನಾಯಕ ವಿರಾಟ್ ಕೊಹ್ಲಿ ಹಾಗೂ ಅಜೇಯ ಅರ್ಧಶತಕ ಸಿಡಿಸಿದ ಮಹೇಂದ್ರ ಸಿಂಗ್ ಧೋನಿ ಟೀಮ್ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 54 ಎಸೆತಗಳನ್ನು ಎದುರಿಸಿದ್ದ ಧೋನಿ ಅಜೇಯ 55 ರನ್ ಗಳಿಸಿ ಭಾರತವನ್ನು ಗೆಲುವಿನ ದಡ ಸೇರಿಸಿದ್ದರು.

ಸಿಡ್ನಿಯಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ನಿಧಾನಗತಿಯ ಇನ್ನಿಂಗ್ಸ್ ಆಡಿದ್ದ ಧೋನಿ ಟೀಕೆಗೆ ಗುರಿಯಾಗಿದ್ದರು. ಆದರೆ ಅಡಿಲೇಡ್ ಮ್ಯಾಚ್ ಗೆಲ್ಲಿಸಿ ತಾವೊಬ್ಬ ಬೆಸ್ಟ್ ಫಿನಿಷರ್ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ಇದೀಗ ಧೋನಿ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಧೋನಿ ಆಟವನ್ನು ಟೀಕಿಸಿದ್ದ ಟೀಕಾಕಾರರ ಕಾಲೆಳೆದಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.