ಆ್ಯಂಬಿಡೆಂಟ್ ಡೀಲ್ ಪ್ರಕರಣ : ಸಿಸಿಬಿ ಪೋಲೀಸರಿಂದ ಜನಾರ್ಧನ ರೆಡ್ಡಿ ಬಂಧನ

ಆ್ಯಂಬಿಡೆಂಟ್ ಮಾರ್ಕೆಟಿಂಗ್ ಡೀಲ್ ಪ್ರಕರಣಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಯನ್ನು ಸಿಸಿಬಿ ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ. ಸಿಸಿಬಿ ನೋಟೀಸ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾದ ರೆಡ್ಡಿ, ಆ್ಯಂಬಿಡೆಂಟ್ ಕಂಪನಿ ಮಾಲೀಕ ಸೈಯದ್ ಅಹಮ್ಮದ್ ಫರೀದ್ ಮತ್ತು ರೆಡ್ಡಿ ಆಪ್ತ ಸಹಾಯಕ ಅಲಿಖಾನ್ ಅವರನ್ನು ಸಿಸಿಬಿ ಪೊಲೀಸರು ಶನಿವಾರ ತಡರಾತ್ರಿವರೆಗೂ ವಿಚಾರಣೆಗೊಳಪಡಿಸಿದರು.
ಜನಾರ್ಧನ ರೆಡ್ಡಿಯನ್ನು ಸುದೀರ್ಘ ಕಾಲ ವಿಚಾರಣೆಗೊಳಪಡಿಸಿದ್ದ ಸಿಸಿಬಿ ಪೊಲೀಸರು ಇದೀಗ  ಬಂಧನಕ್ಕೊಳಪಡಿಸಿದ್ದಾರೆ. ರೆಡ್ಡಿಯವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಶೀಘ್ರದಲ್ಲಿಯೇ ಅವರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಿದ್ದು, ನಂತರ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಗಾಲಿ ಜನಾರ್ಧನರೆಡ್ಡಿಗೆ ನೋಟೀಸ್ ಜಾರಿ ಮಾಡಿತ್ತು. ಸಿಸಿಬಿ ಪೋಲೀಸರಿಂದ ತಲೆಮರಿಸಿಕೊಂಡಿದ್ದ ಜನಾರ್ಧನ ರೆಡ್ಡಿ ಶನಿವಾರ ಸಿಸಿಬಿ ಅಧಿಕಾರಿಗಳ ಎದುರು ಹಾಜರಾಗಿದ್ದರು.
ಪ್ರಕರಣ ಸಂಬಂಧ ಸಿಕ್ಕಿರುವ ಸಾಕ್ಷ್ಯಾಧಾರಗಳು, ಸಾಕ್ಷಿಗಳ ಹೇಳಿಕೆ ಮೇರೆಗೆ ರೆಡ್ಡಿಯವರನ್ನು ಬಂಧಿಸಲು ನಿರ್ಧರಿಸಿದ್ದೇವೆ. ಶೀಘ್ರದಲ್ಲಿಯೇ ನ್ಯಾಯಾಧೀಶರ ಮುಂದೆ ಹಾಜರುಪಡಿಸುತ್ತೇವೆ. ಬಳಿಕ ಹಣವನ್ನು ವಶಕ್ಕೆ ಪಡೆದುಕೊಂಡು ಹೂಡಿಕೆದಾರರಿಗೆ ನೀಡಲಾಗುತ್ತದೆ ಎಂದು ಸಿಸಿಬಿ ಹೆಚ್ಚುವರಿ ಆಯುಕ್ತ ಅಲೋಕ್ ಕುಮಾರ್ ಅವರು ಹೇಳಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.