ಮೈತ್ರಿಕೂಟ ಸರ್ಕಾರಕ್ಕೆ ಮತ್ತೊಂದು ದೊಡ್ಡ ಶಾಕ್‌ : ಇಬ್ಬರು ಶಾಸಕರಿಂದ ರಾಜೀನಾಮೆ

ಮೈತ್ರಿಕೂಟ ಸರ್ಕಾರಕ್ಕೆ ಇಂದು ಮತ್ತೊಂದು ದೊಡ್ಡ ಶಾಕ್‌ ಎದುರಾಗಿದ್ದು, ಸಚಿವ ಎಂಟಿಬಿ ನಾಗರಾಜ್‌ ಹಾಗೂ ಶಾಸಕ ಡಾ. ಸುಧಾಕರ್‌ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕೆಲ ಕ್ಷಣದ ಮುಂಚೆ ಸ್ಪೀಕರ್‌ ಕಛೇರಿಗೆ ಆಗಮಿಸಿದ ಈ ಇಬ್ಬರು ಸ್ಪೀಕರ್‌ ರಮೇಶ್‌ ಕುಮಾರ್‌ ಅವರ ಬಳಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.

ಇಂದು ಬೆಳಿಗ್ಗೆಯಷ್ಟೇ ಅತೃಪ್ತ ಶಾಸಕ ರಮೇಶ್‌ ಜಾರಕಿಹೊಳಿ ಇನ್ನೂ ಹಲವರು ರಾಜೀನಾಮೆ ನೀಡಲಿದ್ದಾರೆಂದು ಹೇಳಿದ್ದು, ಅದೀಗ ನಿಜವಾಗಿದೆ.

ಮಂಗಳವಾರ ನಡೆದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಗೆ ಈ ಇಬ್ಬರು ಗೈರು ಹಾಜರಾಗಿದ್ದು, ಆಗಲೇ ಇವರುಗಳು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆಂದು ಊಹಿಸಲಾಗಿತ್ತು. ಅದರಂತೆ ಅವರುಗಳು ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿದ್ದು, ಯಾವುದೇ ಕ್ಷಣದಲ್ಲಿ ಸರ್ಕಾರ ಪತನವಾಗುವ ಸಾಧ್ಯತೆ ಇದೆ.

 

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.