ಸಂಜೆ ಖುದ್ದು ಹಾಜರಾಗಿ : ಅತೃಪ್ತ ಶಾಸಕರಿಗೆ ಸುಪ್ರೀಂಕೋರ್ಟ್ ಸೂಚನೆ

ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನಲ್ಲಿ ಬೀಡು ಬಿಟ್ಟಿರುವ ಅತೃಪ್ತ ಶಾಸಕರು, ರಾಜೀನಾಮೆ ಅಂಗೀಕರಿಸಲು‌ ವಿಧಾನಸಭಾ ಸ್ಪೀಕರ್ ವಿಳಂಬ ಮಾಡುತ್ತಿದ್ದಾರೆಂದು ಆರೋಪಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ಇಂದಿಗೆ ವಿಚಾರಣೆಯನ್ನು ನಿಗದಿ ಮಾಡಿದ್ದ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರು ಇದೀಗ ವಿಚಾರಣೆಯನ್ನು ನಾಳೆಗೆ ಮುಂದೂಡಿದ್ದಾರೆಂದು ಹೇಳಲಾಗಿದೆ.

ಅಲ್ಲದೇ ಅತೃಪ್ತ ಶಾಸಕರು ಖುದ್ದಾಗಿ ಸ್ಪೀಕರ್‌ ಮುಂದೆ ಹಾಜರಾಗುವಂತೆ ನ್ಯಾಯಾಲಯ ಸೂಚಿಸಿದ್ದು, ಇದರಿಂದಾಗಿ ಸ್ಪೀಕರ್‌ ಕರೆದಿದ್ದರೂ ವಿಚಾರಣೆಗೆ ಹಾಜರಾಗದಿರಲು ನಿರ್ಧರಿಸಿದ್ದ ಶಾಸಕರಿಗೆ ತೀವ್ರ ಹಿನ್ನಡೆಯಾಗಿದೆ.

ಮುಂದಿನ ವಿಚಾರಣೆಯನ್ನು ನ್ಯಾಯಾಲಯ ನಾಳೆಗೆ ಮುಂದೂಡಿದ್ದು, ಅತೃಪ್ತ ಶಾಸಕರು ಇಂದು ಸಂಜೆಯೊಳಗಾಗಿ ಸ್ಪೀಕರ್‌ ರಮೇಶ್‌ ಕುಮಾರ್‌ ಅವರ ಮುಂದೆ ಹಾಜರಾಗಲೇಬೇಕಿದೆ.

 

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.