Bengaluru high alert : ಬೆಂಗಳೂರು ಹೈ ಅಲರ್ಟ್ ಪ್ರಮುಖ ಸ್ಥಳಗಳಲ್ಲಿ ಕಟ್ಟೆಚ್ಚರ…

ಉಗ್ರರು ನುಸುಳಿರುವ ಶಂಕೆ ಹಿನ್ನೆಲೆಯಲ್ಲಿ ಈಗಾಗಲೇ ಸಿಲಿಕಾನ್ ಸಿಟಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಮುಖ್ಯಮಂತ್ರಿಗಳ ಸೂಚನೆ ಹಿನ್ನೆಲೆ ರಾಜ್ಯದಲ್ಲಿಯೂ ಪೊಲೀಸ್​ ಕಣ್ಗಾವಲು ಹೆಚ್ಚಿಸಲಾಗಿದ್ದು, ಸಿಲಿಕಾನ್​ ಸಿಟಿಯಲ್ಲಿ ವಿಧಾನಸೌಧ, ವಿಮಾನ ನಿಲ್ದಾಣ, ಮೆಟ್ರೋ, ಮಾರುಕಟ್ಟೆ, ಮೆಜೆಸ್ಟಿಕ್, ಮೆಜೆಸ್ಟಿಕ್ ರೈಲ್ವೆ ನಿಲ್ದಾಣ ಸೇರಿದಂತೆ ಜನಸಂದಣಿಯಿರುವ ಪ್ರದೇಶಗಳಲ್ಲಿ ಪ್ರಮುಖ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಬೆಂಗಳೂರಿನಲ್ಲಿ ಹೈ ಅಲರ್ಟ್ ಘೋಷಣೆ ಹಿನ್ನೆಲೆ ನಗರ ಪೊಲೀಸ್​ ಕಮಿಷನರ್​ ಭಾಸ್ಕರ್​ ರಾವ್​, ಹೆಚ್ಚುವರಿ ಪೊಲೀಸ್ ಆಯುಕ್ತರು, ಡಿಸಿಪಿಗಳೊಂದಿಗೆ ತುರ್ತು ಸಭೆ ನಡೆಸಿ ನಗರದ ಪ್ರಮುಖ ಸ್ಥಳದಲ್ಲಿ ಹೆಚ್ಚುವರಿ ಪೊಲೀಸ್​ ಸಿಬ್ಬಂದಿ ನೇಮಕ, ಹೊರಹೊಲಯದಲ್ಲಿ ನಾಕಾಬಂಧಿ ಕುರಿತು ಮಾಹಿತಿ ಪಡೆದಿದ್ದಾರೆ.

ಪಿಜಿ ಹಾಸ್ಟೆಲ್​, ಸರ್ವೀಸ್​ ಅಪಾರ್ಟ್​ಮೆಂಟ್​, ಧಾರ್ಮಿಕ ಸ್ಥಳಗಳ ಹತ್ತಿರದ ತಂಗುದಾಣ ಪ್ರದೇಶಗಳನ್ನು ಪರಿಶೀಲಿಸುವಂತೆ ಸೂಚಿಸಲಾಗಿದೆ.

ವಿಧಾನಸೌಧಕ್ಕೂ ಕೂಡ ಹೆಚ್ಚಿನ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ವಿಧಾನಸೌಧದ ಎಲ್ಲಾ ಗೇಟ್‍ ಗಳಲ್ಲಿ ಪೊಲೀಸ್ ಕಟ್ಟೆಚ್ಚರ ವಹಿಸಿದೆ. ವಿಧಾನಸೌಧದ ಒಳಗೆ ಹೋಗುವವರ ತಪಾಸಣೆ ಮಾಡಿ ಬಳಿಕ ಪ್ರವೇಶಕ್ಕೆ ಅನುವು ಮಾಡಿಕೊಡಲಾಗುತ್ತಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.