ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಆರೋಪಿ ಓಬಳರಾಜ್, ಸಚಿವರ ವಿಶೇಷಾಧಿಕಾರಿ ಸೇವೆಯಿಂದ ಬಿಡುಗಡೆ

ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಆರೋಪಿಯಾಗಿರುವ ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ವಿಶೇಷಾಧಿಕಾರಿ ಓಬಳರಾಜ್ ನನ್ನು ಸಚಿವರ ವಿಶೇಷಾಧಿಕಾರಿ ಹುದ್ದೆಯಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ಬಿಡುಗಡೆ ಮಾಡಲಾಗಿದೆ. ಈ ಸಂಬಂಧ ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಅಲ್ಲದೇ ಸಿಎಂ ಸಿದ್ಧರಾಮಯ್ಯ ಮತ್ತು ರಾಜ್ಯ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾಧವ್ ಅವರಿಗೂ ಪತ್ರ ಬರೆದು, ಓಬಳರಾಜ್ ನನ್ನು ಸೇವೆಯಿಂದ ಬಿಡುಗಡೆ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

Comments are closed.

Social Media Auto Publish Powered By : XYZScripts.com