ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಆಸ್ಪತ್ರೆಗೆ ದಾಖಲು

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಕರುಣಾನಿಧಿಯವರು  ಅನಾರೋಗ್ಯದಿಂದ ಬಳಲುತ್ತಿದ್ದು ಗುರುವಾರ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
karunanidhi1
ಹಿಂದಿನ ಹಲವಾರು ದಿನಗಳಿಂದ ಕರುಣಾನಿಧಿ ಆರೋಗ್ಯ ಸರಿ ಇರಲಿಲ್ಲ. ಆದರೂ ಕರುಣಾನಿಧಿಯವರಿಗೆ ಆಸ್ಪತ್ರೆಗೆ ದಾಖಲಾಗದೆ ಮನೆಯಲ್ಲಿಯೇ ಚಿಕಿತ್ಸೆಯನ್ನು ಪಡೆಯುತ್ತಿದ್ದರು.  ಗುರುವಾರ ಅಲರ್ಜಿ ಕಾಣಿಸಿಕೊಂಡಿದ್ದರಿಂದ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾವೇರಿ ಆಸ್ಪತ್ರೆಯ ವೈಧ್ಯರೊಬ್ಬರು ಪ್ರತಿಕ್ರಿಯಿಸಿ ಎಂ.ಕರುಣಾನಿಧಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.  ನಮ್ಮ ಆಸ್ಪತ್ರೆಯ ವೈದ್ಯರ ತಂಡವು ಅವರ ಆರೋಗ್ಯದ ನಿಗಾ ವಹಿಸುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಇನ್ನೂ ಕೆಲವು ದಿನಗಳ ಕಾಲ ಕರುಣಾನಿಧಿ ಅವರು ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ ಎಂದು  ಮಾಹಿತಿ ನೀಡಿದ್ದಾರೆ.

Comments are closed.

Social Media Auto Publish Powered By : XYZScripts.com