ಜಯಲಲಿತಾ ವೈರಿಯನ್ನು ಭೇಟಿಯಾದ ರಜಿನಿಕಾಂತ್!

ಸೂಪರ್ ಸ್ಟಾರ್ ರಜಿನಿಕಾಂತ್ ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುನಾನಿಧಿಯವರನ್ನ ಶನಿವಾರ (ಡಿ.10) ಸಂಜೆ ಭೇಟಿಯಾಗಿದ್ದಾರೆ. ಇತ್ತೀಚೆಗೆ ಕರುಣಾನಿಧಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ. ರಜಿನಿಕಾಂತ್, ಕರುಣಾನಿಧಿಯವರನ್ನ ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದ್ದಾರೆ ಎಂದು ತಿಳಿದುಬಂದಿದೆ.

superstar-rajinikanth-admitted
ರಜಿನಿಕಾಂತ್ ರಾಜಕೀಯಕ್ಕೆ ಬರ್ತಾರೆ ಅನ್ನೋ ಮಾತುಗಳು ಕೇಳಿ ಬರುತ್ತಿರುವ ಸಮಯದಲ್ಲೇ ಕರುಣಾನಿಧಿಯನ್ನು ಭೇಟಿ ಮಾಡಿರುವುದು ಹಲವಾರು ಕುತೂಹಲಗಳಿಗೆ ದಾರಿ ಮಾಡಿಕೊಟ್ಟಿದೆ. ಕರುಣಾನಿಧಿ ಪುತ್ರ ಸ್ಟಾಲಿನ್ ಕೂಡ ಸ್ಥಳದಲ್ಲಿ ಹಾಜರಿದ್ದರು. ಈ ಸಂದರ್ಭದಲ್ಲಿ ಡಿಎಂಕೆ ಪಾರ್ಟಿ ಚೀಫ್ ಮತ್ತು ರಜಿನಿ ಸಾಕಷ್ಟು ಹೊತ್ತು ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ. ಜಯಲಲತಾ ಸಾವಿನ ನಂತರ ಎಐಎಡಿಎಂಕೆ ಪಕ್ಷವನ್ನು ಶಶಿಕಲಾ ತಮ್ಮ ಹಿಡಿತಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸುತ್ತಿರುವ ಸಮಯದಲ್ಲೇ ರಜಿನಿಕಾಂತ್, ಕರುಣಾನಿಧಿಯವರನ್ನು  ಭೇಟಿಯಾಗಿ ಅಚ್ಚರಿ ಮೂಡಿಸಿದ್ದಾರೆ. ಇನ್ನು ಜಯಲಲಿತಾ ಅವರ ನಿಧನದ ಹಿನ್ನೆಲೆಯಲ್ಲಿ ಸೂಪರ್ ಸ್ಟಾರ್ ಈ ವರ್ಷ ತಮ್ಮ ಹುಟ್ಟುಹಬ್ಬವನ್ನ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ.

Comments are closed.

Social Media Auto Publish Powered By : XYZScripts.com