ಕಾಂಗ್ರೆಸ್ ಪಕ್ಷದಿಂದಲೂ ಮೇಟಿ ಅಮಾನತು?.

ರಾಸಲೀಲೆ ಪ್ರಕರಣದಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಎಚ್ ವೈ ಮೇಟಿಯವರನ್ನು ಕಾಂಗ್ರೆಸ್ ಪಕ್ಷದಿಂದಲೂ ಅಮಾನತು ಮಾಡುವ ಸಾಧ್ಯತೆ ಇದೆ ಎಂಬ ಸುದ್ದಿ ರಾಜ್ಯದಲ್ಲಿ ಹರಿದಾಡುತ್ತಿದೆ.

ಮೇಟಿ ರಾಸಲೀಲೆ ಪ್ರಕರಣದಿಂದ ರಾಜ್ಯದಲ್ಲಿ ಕಾಂಗ್ರೆಸ್ ವರ್ಚಸ್ಸಿಗೆ ಧಕ್ಕೆಯಾಗಿದೆ. ಇದರಿಂದ ಮೇಟಿಯವರನ್ನು ಪಕ್ಷದಿಂದ ಅಮಾನತು ಮಾಡಿ ಎಂದು ಹಲವಾರು ಶಾಸಕರು ತಮ್ಮ ಅಭಿಪ್ರಾಯವನ್ನು ಹೊರಹಾಕಿದ್ದಾರೆ. ಇದರಿಂದ ಪಕ್ಷದ ಸದಸ್ಯತ್ವ ಸ್ಥಾನದಿಂದ ಮೇಟಿಯನ್ನು ವಜಾ ಮಾಡಲು ಕಾಂಗ್ರೆಸ್ ಪಕ್ಷ ಮುಂದಾಗಿದೆ ಎಂದು ತಿಳಿದುಬಂದಿದೆ.

meeti-8

ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಸದನದಲ್ಲಿ ಮೂವರು ಶಾಸಕರು ನೀಲಿ ಚಿತ್ರ ವೀಕ್ಷಣೆ ಮಾಡಿದ್ದರು. ಇದರಿಂದ  ಅಂದು ವಿರೋದ ಪಕ್ಷದಲ್ಲಿದ್ದ ಕಾಂಗ್ರೆಸ್  ನೀಲಿ ಚಿತ್ರ ನೋಡಿದ ಮೂರು ಶಾಸಕರನ್ನು ವಜಾ ಮಾಡಬೇಕು ಎಂದು ಒತ್ತಾಯಿಸಿದ್ದರು. ಹಾಗೆಯೇ ಮೇಟಿಯವರು ಪಕ್ಷದ ಸದಸ್ಯರಾಗಿ ಮುಂದುವರಿದರೆ ವಿರೋದ ಪಕ್ಷಗಳು ಈ ವಿಚಾರವನ್ನು ತಮ್ಮ ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಳ್ಳಬಹುದು ಎಂಬ ಭಾವನೆ ಕಾಂಗ್ರೆಸ್ ಮುಖಂಡರಲ್ಲಿ ಮೂಡಿದೆ.

ತಮ್ಮ ಕೈಗೆ ಅಧಿಕಾರ ಬಂದಾಗಿನಿಂದಲೂ ಸರಿಯಾಗಿ ನಿಭಾಯಿಸಿಲ್ಲ. ಕೆಲವೊಂದು ವಿಚಾರಗಳಲ್ಲಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುವಲ್ಲಿ ಆಡಳಿತ ಸರ್ಕಾರ ವಿಫಲವಾಗಿದೆ ಎಂಬ ಮಾತು ಕೇಳಿ ಬಂದಿದ್ದವು. ಡಿ.ಕೆ.ರವಿ ಮತ್ತು ಕಾವೇರಿ ವಿಚಾರದಲ್ಲಂತೂ ರಾಜ್ಯ ಸರ್ಕಾರ ತೆಗೆದುಕೊಂಡ ನಿರ್ದಾರಕ್ಕೆ ರಾಜ್ಯಾದ್ಯಂತ ವಿರೋಧ ವ್ಯಕ್ತವಾಗಿತ್ತು.  ಈ ಎಲ್ಲದರ ನಡುವೆ 2018ರ ಚುನಾವಣೆಯನ್ನು ಎದುರಿಸಲು ಸಿದ್ಧರಾಗುತ್ತಿರುವಾಗಲೇ ಮೇಟಿ ರಾಸಲೀಲೆ ಪ್ರಕರಣ ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಮೇಟಿ ರಾಸಲೀಲೆ ಪ್ರಕರಣದಿಂದ ಜನರ ಮದ್ಯೆ ನಿಂತು ಹೇಗೆ ಮತ ಕೇಳುವುದು ಎಂಬ ಭಾವನೆ ಕಾಂಗ್ರೆಸ್ ನಾಯಕರಲ್ಲಿ ಉಂಟಾಗಿದೆ. ಇದರಿಂದ ಮೇಟಿಯವರನ್ನು ಪಕ್ಷದಿಂದ ಅಮಾನತು ಮಾಡಬೇಕು ಎಂದು ಹಲವು ನಾಯಕರು ಅಭಿಪ್ರಾಯಪಟ್ಟಿದ್ದಾರೆ. ಇದಲ್ಲದೆ ಶುಕ್ರವಾರ ಎಐಸಿಸಿ ಉಪಾಧದ್ಯಕ್ಷರಿಗೆ ಮೇಟಿಯ ವಿಡಿಯೋವನ್ನು ನೀಡಲಿದೆ ಎಂಬ ಮಾಹಿತಿ ಕೂಡ ಲಭ್ಯವಿದ್ದು ಮುಂದೆ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕು?.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಕಾರ್ಯಾಕಾರಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು, ಮೇಟಿ ಉಚ್ಛಾಟನೆ ಸಂಬಂಧ  ಯಾವುದೇ ರೀತಿಯ ಮನವಿ ಬಂದಿಲ್ಲ. ಆದರೆ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗದ ರೀತಿಯಲ್ಲಿ ಯಾವುದೇ ಶಾಸಕರು ಯಾವುದೇ ಸಲಹೆ ನೀಡಿದರು ಅದನ್ನು ಸ್ವೀಕರಿಸಲು ಪಕ್ಷ ಸಿದ್ಧವಿದೆ. ಪಕ್ಷದ ವರ್ಚಸ್ಸು ಉಳಿಸಿಕೊಳ್ಳುವ ನಿಟ್ಟಿನಲ್ಲಿ  ಶಾಸಕರನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

Comments are closed.