ನಮ್ಮ ಕುಟುಂಬದಿಂದ ಇಬ್ಬರು ಮಾತ್ರ ಸ್ಪರ್ಧೆ- ಎಚ್.ಡಿ.ಕೆ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಮತ್ತು ರೇವಣ್ಣ ಮಾತ್ರ ಸ್ಪರ್ಧೆ ಮಾಡಲಿದ್ದೇವೆ. ಉಳಿದಂತೆ ಯಾರೂ ನಮ್ಮ ಕುಟುಂಬದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ  ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

kumara-swamy

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಮ್ಮ ಕುಟುಂಬದ ಸದಸ್ಯರು ಲೋಕಸಭೆ ಚುನಾವಣೆ ವೇಳೆ ಸ್ಪರ್ಧೆ ಮಾಡಬೇಕೆ ಬೇಡವೇ ಎನ್ನುವುದು ಸದ್ಯಕ್ಕೆ ಅಪ್ರಸ್ತುತ ಎಂದು ಹೇಳುವ ಮೂಲಕ ಭವಾನಿ ರೇವಣ್ಣ, ಅನಿತಾ ಕುಮಾರಸ್ವಾಮಿ, ಪ್ರಜ್ವಲ್ ಹಾಗೂ ನಿಖಿಲ್ ಕುಮಾರಸ್ವಾಮಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂಬ ಎಲ್ಲಾ ಊಹಾ ಪೋಹಾಗಳಿಗೆ ತೆರೆ ಎಳೆದಿದ್ದಾರೆ.

ಬಳಿಕ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿ ಮಾತನಾಡಿ, ಉತ್ತರ ಕರ್ನಾಟಕದಿಂದ ಸ್ಪರ್ಧಿಸುವಂತೆ ಕಾರ್ಯಕರ್ತರ ಒತ್ತಡವಿದೆ. ಆದರೆ ನನಗೆ ರಾಜಕೀಯವಾಗಿ ಮರುಜನ್ಮ ನೀಡಿದ ರಾಮನಗರ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ. ಯಾವುದೇ ಕಾರಣಕ್ಕೂ ಕ್ಷೇತ್ರ ಬದಲಾವಣೆಯ ಪ್ರಶ್ನೆಯೇ ಇಲ್ಲ  ಎಂದು ತಿಳಿಸಿದರು.

Comments are closed.