ತಮಿಳುನಾಡಿಗೆ 2 ಸಾವಿರ ಕ್ಯೂಸೆಕ್ಸ್ ಹರಿಸುವಂತೆ ಸುಪ್ರೀಂ ಆದೇಶ!

ಕಾವೇರಿ ನದಿ ನೀರು ಹಂಚಿಕೆ ನ್ಯಾಯಾಧೀಕರಣದ ತೀರ್ಪಿನ ವಿರುದ್ಧ ಕರ್ನಾಟಕ ಸಲ್ಲಿಸಿದ್ದ  ಮೇಲ್ಮನವಿಗೆ ತೀವ್ರ ಹಿನ್ನಡೆಯಾಗಿದೆ. ಅರ್ಜಿ ವಿಚಾರಣೆ ನಡೆಸಿದ ಸುಪ್ರಿಂ ಕೋರ್ಟ್ ಫೆಬ್ರವರಿ 7ರ ವರೆಗೆ ಪ್ರತಿನಿತ್ಯ 2 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ ಹೊರಡಿಸಿದೆ.

ತಮಿಳುನಾಡು ಮತ್ತು ಕರ್ನಾಟಕ ಎರಡು ರಾಜ್ಯಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಸುಪ್ರೀಂಕೋರ್ಟ್ ನಲ್ಲಿ ಇಂದು ವಿಚಾರಣೆ ನಡೆಯಿತು. ಈ ವೇಳೆ ವಾದ ವಿವಾದಗಳನ್ನು ಆಲಿಸಿದ ನ್ಯಾ. ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಫೆಬ್ರವರಿ 7 ರ ವರೆಗೆ ಪ್ರತಿನಿತ್ಯ ಎರಡು ಸಾವಿರ ಕ್ಯೂಸೆಕ್ಸ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ಆದೇಶ ನೀಡಿದೆ.

ರಾಜ್ಯದಲ್ಲಿ ಪ್ರಸ್ತುತ ವರ್ಷ ಬರಗಾಲ ಎದುರಾಗಿದ್ದು, ರಾಜ್ಯದ ಜನರಿಗೆ ಕುಡಿಯುವ ನೀರಿಗೆ ತೊಂದರೆಯಾಗಿದೆ. ಈ ಬಗ್ಗೆ ರಾಜ್ಯದ ಪರ ವಕೀಲ ಪಾಲಿ ನಾರಿಮನ್ ವಾದ ಮಂಡಿಸಿದರು. ಅಲ್ಲದೆ ಕಾವೇರಿ ಜಲಾನಯನ ಪ್ರದೇಶಗಳಿಗೆ ಕೇಂದ್ರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಸುಪ್ರಿಂ ಕೋರ್ಟ್ ಗೆ ವರದಿ ಸಲ್ಲಿಸಿತ್ತು. ಆದರೂ ಸುಪ್ರಿಂ ಕೋರ್ಟ್ ತಮಿಳುನಾಡಿಗೆ ನೀರು ಹರಿಸುವಂತೆ ತೀರ್ಪು ನೀಡಿರುವುದು ರಾಜ್ಯದ ಜನರಲ್ಲಿ ಆತಂಕ ಹೆಚ್ಚಿಸಿದೆ.

Comments are closed.