ಅಕ್ರಮ ಶಸ್ತ್ರಾಸ್ತ್ರ ಕಾಯ್ದೆ ಕೇಸಿಂದ ಸಲ್ಮಾನ್ ಖಾನ್ ಖುಲಾಸೆ!

ಕೃಷ್ಣಮೃಗ ಭೇಟೆ ವಿಚಾರಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿ ಎದುರಿಸುತ್ತಿದ್ದ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಜೋಧ್ ಪುರ ನ್ಯಾಯಾಲಯ ಬಿಗ್ ರಿಲೀಫ್ ನೀಡಿದೆ.

ಹಮ್  ಸಾಥ್ ಸಾಥ್  ಹೈ ಸಿನಿಮಾ ಶೂಟಿಂಗ್​ ವೇಳೆ ಸಲ್ಮಾನ್ ಖಾನ್​ ಕೃಷ್ಣಮೃಗ ಬೇಟೆಯಾಡಿದ್ದಾರೆ. ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳು ಇಲ್ಲದ ಕಾರಣ ಸಲ್ಮಾನ್ ಖಾನ್ ರನ್ನು ರಾಜಾಸ್ಥಾನದ ಜೋದ್ ಪುರ ನ್ಯಾಯಾಲಯ ಖುಲಾಸೆ ಗೊಳಿಸಿ ಆದೇಶ ಹೊರಡಿಸಿದೆ.

ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪ ಮೇರೆಗೆ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಜೈಲು ಶಿಕ್ಷೆ ಭೀತಿ ಎದುರಿಸುತ್ತಿದ್ದ ಬಾಲಿವುಡ್ ನಟ ಸಲ್ಮಾನ್ ಖಾನ್ ರ ವಿರುದ್ಧ ಇದ್ದ ಆರೋಪಗಳನ್ನು ಪ್ರಾಸಿಕ್ಯೂಷನ್ ಸಾಬೀತು ಪಡಿಸುವಲ್ಲಿ ವಿಫಲವಾಯಿತು. ಇದರಿಂದ ನ್ಯಾಯಾಲಯ ಸಲ್ಮಾನ್ ಖಾನ್ ರನ್ನು ಆರೋಪ ಮುಕ್ತರನ್ನಾಗಿ ಮಾಡಿತು.

ವಾದ ಮಂಡಿಸಿದ ಸಲ್ಮಾನ್ ಖಾನ್ ಪರ ವಕೀಲರು 1998ರ ಅಕ್ಟೋಬರ್ 1 ಮತ್ತು 2ರ ನಡುವಿನ ರಾತ್ರಿ ನಟ ಸಲ್ಮಾನ್ ಖಾನ್ ಶಸ್ತ್ರಾಸ್ತ್ರವನ್ನೇ ಬಳಕೆ ಮಾಡಿಲ್ಲ. ಹೀಗಿರುವಾಗ ಕೃಷ್ಣಮೃಗ ಭೇಟೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದರು. ಸುಳ್ಳು ಸಾಕ್ಷ್ಯ ಸೃಷ್ಟಿಸಿ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಪೊಲೀಸರು ದೂರು ದಾಖಲಿಸಿಕೊಂಡಿದ್ದರು ಎಂದು ತಮ್ಮ ವಾದ ಮಂಡಿಸಿದರು.

ವಾದ ವಿವಾದಗಳನ್ನು ಪರಿಶೀಲಿಸಿದ ನ್ಯಾಯಾಲಯ ಸಾಂದರ್ಭಿಕ ಮತ್ತು ಸಂಶಯಾತೀತ ಸಾಕ್ಷ್ಯಗಳ ಕೊರತೆ ಹಿನ್ನಲೆಯಲ್ಲಿ ನ್ಯಾಯಾಲಯ ಸಲ್ಮಾನ್ ಖಾನ್ ರನ್ನು ಪ್ರಕರಣದಿಂದ ಖುಲಾಸೆಗೊಳಿಸಿದೆ.

Comments are closed.

Social Media Auto Publish Powered By : XYZScripts.com