ಒಂದಾದ ಕೈ ಹಾಗೂ ಸೈಕಲ್ : ಬಿಜೆಪಿ ಸೋಲಿಸಲು ರಣತಂತ್ರ

ಬಹುನಿರೀಕ್ಷಿತ ಉತ್ತರ ಪ್ರದೇಶ ವಿಧಾನಸಭೆ ಚುನಾವಣಾ ಕಣದಲ್ಲಿ ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ಮೈತ್ರಿ ಸ್ಪಷ್ಟವಾಗಿದೆ ಎಂದು ತಿಳಿದುಬಂದಿದೆ. ಬಿಹಾರದಲ್ಲಿ ಆರ್‌ಜೆಡಿ, ಜೆಡಿಯು ಮೈತ್ರಿ ಮಾಡಿಕೊಂಡು ಬಿಜೆಪಿಯನ್ನು ಸೋಲಿಸಿದಂತೆಯೇ ಉತ್ತರಪ್ರದೇಶದಲ್ಲಿ ಬಿಜೆಪಿಗೆ ಸೋಲುಣಿಸಲು ಕಾಂಗ್ರೆಸ್‌-ಎಸ್‌ಪಿ ಮೈತ್ರಿ ಮಾಡಿಕೊಂಡಿವೆ ಎನ್ನಲಾಗಿದೆ.
ಇನ್ನೂ ಉತ್ತರಪ್ರದೇಶದ ಚುನಾವಣೆಯಲ್ಲಿ ಕಾಂಗ್ರೆಸ್‌ ಹಾಗೂ ಎಸ್‌ಪಿ ಕ್ಷೇತ್ರಗಳನ್ನು ಹಂಚಿಕೊಂಡು ಚುನಾವಣೆಗೆ ಸಜ್ಜಾಗುತ್ತಿದ್ದಾರೆ. ಇನ್ನೂ ಉತ್ತರ ಪ್ರದೇಶದ ಒಟ್ಟು 403 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ 105 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದರೆ, ಸಮಾಜವಾದಿ ಪಕ್ಷಕ್ಕೆ 298 ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದೆ. ಈ ವಿಷಯವನ್ನು ಇಂದು  ಕಾಂಗ್ರೆಸ್ ಘೋಷಿಸಿಕೊಂಡಿದೆ.
ಯುಪಿ ಚುನಾವಣೆಯಲ್ಲಿ ಕಾಂಗ್ರೆಸ್‌ 121 ಕ್ಷೇತ್ರಗಳನ್ನು ನೀಡುವಂತೆ ಕೇಳಿತ್ತು. ಆದರೆ ಯುಪಿ ಸಿಎಂ ಆದ ಅಖಿಲೇಶ್ ಯಾದವ್ 100 ಕ್ಕಿಂತ ಹೆಚ್ಚು ಕ್ಷೇತ್ರಗಳನ್ನ ಬಿಟ್ಟುಕೊಡಲು ಒಪ್ಪಿಕೊಂಡಿರಲಿಲ್ಲ. ನಂತರ ಎಸ್‌ಪಿ-ಕೈ ಮೈತ್ರಿಯಲ್ಲಿ ಗೊಂದಲಮಯ ವಾತಾವರಣ ಮೂಡಿತ್ತು. ಇದೀಗ ಕಾಂಗ್ರೆಸ್‌ 105 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದು ಖಚಿತವಾಗಿದೆ. ಅಂತೆಯೇ ಎಸ್‌ಪಿ-ಕಾಂಗ್ರೆಸ್‌ ಮೈತ್ರಿ ಬಹುತೇಕ ಖಚಿತಾಗಿದ್ದು, ಉತ್ತರಪ್ರದೇಶದಲ್ಲಿ ಚುನಾವಣೆ ರಂಗೇರಲಿದೆ.

Comments are closed.

Social Media Auto Publish Powered By : XYZScripts.com