ಬಾಲಕಿ ಮೇಲೆ ಅತ್ಯಾಚಾರ ಮಾಡಿದ 65 ವರ್ಷದ ವೃದ್ದ

ಇತ್ತೀಚಿಗೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು ಕೆಲವರು ತಮ್ಮ ವಯಸ್ಸನ್ನು ಲೆಕ್ಕಿಸದೆ ಅತ್ಯಾಚಾರ ಮಾಡುತ್ತಿದ್ದಾರೆ. ಯುವಕರು ಯುವತಿಯರ ಮೇಲೆ ಅತ್ಯಾಚಾರ ಮಾಡುವುದನ್ನು ನೀವು ಕೇಳಿದ್ದೀರಿ ಆದರೆ ಇಲ್ಲೊಬ್ಬ ವೃದ್ದ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾನೆ.

ಹೌದು ಚಾಕಲೇಟ್ ಆಸೆ ತೋರಿಸಿ 65 ವರ್ಷದ ವೃದ್ಧ 10 ವರ್ಷದ ಮುಗ್ದ ಬಾಲಕಿ ಮೇಲೆ ಅತ್ಯಾಚಾರ ಮಾಡಿರುವ ಘಟನೆ ವಿಜಯಪುರ ತಾಲೂಕಿನ ಹೊನವಾಡ ಗ್ರಾಮದಲ್ಲಿ ಘಟನೆ ನಡೆದಿದೆ.

ಈ  ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಸ್ಪತ್ರೆಯಲ್ಲಿ ಬಾಲಕಿಗೆ ವೈದ್ಯಕೀಯ ತಪಾಸಣೆ ಮಾಡಲಾಗುತ್ತಿದೆ. ಇನ್ನೂ ಆರೋಪಿ ಶಶಿಕಾಂತ ವಿಠ್ಠಲ ಸಾಲಿಯನ್ನು ಬಂಧನ ಮಾಡಿದ್ದು, ಫೋಕ್ಸೋ ಕಾಯ್ದೆ ಅಡಿ ತಿಕೋಟಾ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

 

 

Comments are closed.

Social Media Auto Publish Powered By : XYZScripts.com