ದ್ರಾವಿಡ್ ಗೆ ಬೆಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್!

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ದಿ ವಾಲ್ ಎಂದೇ ಪ್ರಸಿದ್ಧಿ ಪಡೆದಿರುವ ಕರ್ನಾಟಕದ ಬ್ಯಾಟ್ಸ್ ಮನ್ ರಾಹುಲ್ ದ್ರಾವಿಡ್ ರವರನ್ನು ಬೆಂಗಳೂರು ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ ಮಾಡಿದೆ.

ಬೆಂಗಳೂರು ವಿಶ್ವವಿದ್ಯಾನಿಲಯದ 52ನೇ ಘಟಿಕೋತ್ಸವದಲ್ಲಿ ರಾಹುಲ್ ದ್ರಾವಿಡ್ ರವರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿಗೆ ಆಯ್ಕೆ ಮಾಡಿಲಾಗಿದೆ. ಜನವರಿ 27 ರಂದು ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು ಅಲ್ಲಿ ದ್ರಾವಿಡ್ ರವರಿಗೆ ಡಾಕ್ಟರೇಟ್ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ. ಪ್ರತಿ ವರ್ಷ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್‌ ನೀಡಲಾಗುತಿತ್ತು. ಕಳೆದ ವರ್ಷ ರಾಜ್ಯಪಾಲರು ಯಾರ ಹೆಸರನ್ನೂ ಅನುಮೋದಿಸದ ಕಾರಣ ಗೌರವ ಡಾಕ್ಟರೇಟ್‌ ನೀಡರಲಿಲ್ಲ. ಪ್ರಸ್ತುತ ವರ್ಷ ಮೂವರ ಹೆಸರನ್ನು ಕಳುಹಿಸಲಾಗಿದ್ದು, ಅದರಲ್ಲಿ  ರಾಹುಲ್ ದ್ರಾವಿಡ್ ಹೆಸರನ್ನು ಮಾತ್ರ ರಾಜ್ಯಪಾಲರು ಅನುಮೋದಿಸಿದ್ದಾರೆ.

ಭಾರತ ಕ್ರಿಕೆಟ್ ತಂಡದ ಕ್ರೀಡಾಪಟುವಾಗಿ, ನಾಯಕನಾಗಿ ರಾಹುಲ್ ದ್ರಾವಿಡ್ ದೇಶಕ್ಕೆ ಮಹತ್ತರವಾದ ಕಾಣಿಕೆ ನೀಡಿದ್ದಾರೆ. ಅಲ್ಲದೆ ಪ್ರಸ್ತುತ ಅಂಡರ್ 19 ಕ್ರಿಕೆಟ್ ಪಟುಗಳಿಗೆ ಮಾರ್ಗದರ್ಶನ ನೀಡುತ್ತಿದ್ದು ಉತ್ತಮ ಮಾರ್ಗದರ್ಶಕರು ಎನಿಸಿಕೊಂಡಿದ್ದಾರೆ. ಈ ನಡುವೆ ಭಾರತ ಕ್ರಿಕೆಟ್ ತಂಡದ ಕೋಚ್ ಆಗುವಂತೆ ಅವಕಾಶ ಬಂದರೂ ದ್ರಾವಿಡ್ ನಿರಾಕರಿಸಿದ್ದಾರೆ.

Comments are closed.

Social Media Auto Publish Powered By : XYZScripts.com