SMK ಯವರೊಂದಿಗೆ ಮಾತನಾಡಿ ಮನವೊಲಿಸುತ್ತೇನೆ.

ಸಿಎಂ ಸಿದ್ದರಾಮಯ್ಯನವರು ಪಕ್ಷದಲ್ಲಿ ಎಲ್ಲರನ್ನೂ ಒಳ್ಳೆ ಭಾವನೆಯಿಂದ ನೋಡಿಕೊಂಡು, ರಾಗದ್ವೇಷ ಇರಲಾರದೇ ಪಕ್ಷವನ್ನು ಮನ್ನಡೆಸಿಕೊಂಡು ಹೋಗುವ ಕೆಲಸ ಮಾಡ್ತಾ ಇದ್ದಾರೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ತಿಳಿಸಿದರು.

ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಬೇಸರ ಮತ್ತು ಬಿನ್ನಾಭಿಪ್ರಾಯಗಳಿರುವುದು ಸುಳ್ಳು ಎಂದಿದ್ದಾರೆ. ಇದೇ ವೇಳೆ  ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೆ ರಾಜೀನಾಮೆ ವಿಚಾರವಾಗಿ ಪ್ರತಿಕ್ರಿಯಿಸಿ, ಪಕ್ಷದ ಮುಖಂಡರು ಕೃಷ್ಣಾ ಅವರ ಮನವೊಲಿಸುವ ಕೆಲಸ ಮಾಡ್ತಾ ಇದ್ದಾರೆ. ಎಸ್.ಎಂ.ಕೃಷ್ಣ  ಅವರ ಮನಸ್ಸು ಅರ್ಥ ಮಾಡಿಕೊಂಡಿದ್ದೇನೆ. ಅವರು ಬಿಜೆಪಿ ಪಕ್ಷಕ್ಕೆ ಹೋಗುವುದಿಲ್ಲ ಎಂಬ ನಂಬಿಕೆ ಇದೆ. ಕಳೆದ ೪೦ ವರ್ಷಗಳಿಂದ ಸಕ್ರೀಯವಾಗಿ ರಾಜಕಾರಣದಲ್ಲಿದ್ದೇನೆ ಎಂದು ತಿಳಿಸಿದರು.

ಬುಧವಾರ ಮೈಸೂರಿನಲ್ಲಿ ಎಸ್.ಎಂ.ಕೃಷ್ಣ ಬಗ್ಗೆ ಮಾತನಾಡಿದ ಸಿ.ಎಂ.ಸಿದ್ದರಾಮಯ್ಯನವರು ಕೃಷ್ಣ ಅವರನ್ನು ಮನವೊಲಿಸುವ ಎಲ್ಲಾ ಪ್ರಯತ್ನ ಮಾಡಲಾಗುತ್ತಿದೆ.ಎಸ್.ಎಂ.ಕೃಷ್ಣ ಅವರ ಜೊತೆ ನಾನು ಇನ್ನೂ ಮಾತನಾಡಿಲ್ಲ. ಮುಂದೆ ಕೃಷ್ಣ ಅವರ ಜೊತೆ ಮಾತನಾಡುತ್ತೇನೆ. ಪಕ್ಷಕ್ಕೆ ಹಿರಿಯರೂ ಬೇಕು,ಯುವಕರೂ ಬೇಕು. ಪಕ್ಷದಲ್ಲಿ ಹಿರಿಯರನ್ನು ಎಲ್ಲಿಯೂ ಕಡೆಗಣಿಸಿಲ್ಲ. ಕಾಂಗ್ರೆಸ್ ಸಮನ್ವಯ ಸಮಿತಿಯಲ್ಲಿ ಎಸ್.ಎಂ.ಕೃಷ್ಣ. ಅವರು ಇದ್ದಾರೆ. ಜಾಫರ್ ಷರೀಪ್ ಕೂಡ ಇದ್ದಾರೆ. ನಾವು ಅವರ ಸಲಹೆಯನ್ನೂ ಪಡೆದುಕೊಂಡಿದ್ದೇವೆ. ಅಲ್ಲಿ ಅವರ ಅಭಿಪ್ರಾಯ ಕೇಳಲಾಗುತ್ತಿದೆ. ಪಕ್ಷಕ್ಕೆ ಎಲ್ಲರೂ ಅನಿವಾರ್ಯ. ಯಾರು ಅನಿವಾರ್ಯ ಅಲ್ಲ ಅನ್ನೋದನ್ನು ನಾನು ಒಪ್ಪುವುದಿಲ್ಲ. ಕಾಂಗ್ರೆಸ್ ಪಕ್ಷ ಎಲ್ಲಾ ವರ್ಗದವನ್ನು ಜೊತೆಯಲ್ಲಿ ಕರೆದುಕೊಂಡು ಹೋಗುವ ಪಕ್ಷ ಎಂದು ಸ್ಪಷ್ಟಪಡಿಸಿದರು.

Comments are closed.

Social Media Auto Publish Powered By : XYZScripts.com