ಶಾಲಾ ಗೋಡೆ ಕುಸಿತ ಅದೃಷ್ಟವಶಾತ್ ಮಕ್ಕಳು ಪಾರು!

ಶಾಲೆಯ ಕಾರಿಡಾರ್ ನ ಮೇಲ್ಛಾವಣಿ ಕುಸಿತಗೊಂಡಿದ್ದು ಅದೃಷ್ಟವಶಾತ್ ವಿದ್ಯಾರ್ಥಿಗಳು ಅಪಾಯದಿಂದ ಪಾರಾದ ಘಟನೆ ಕೊಪ್ಪಳ ನಗರದ ಕೇಂದ್ರೀಯ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದಿದೆ.

ಜವಾಹರ ರಸ್ತೆಯಲ್ಲಿರುವ ಕೇಂದ್ರೀಯ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಿಗ್ಗೆ ಕಾರಿಡಾರ್ ನ ಮೇಲ್ಛಾವಣಿ ಕುಸಿದಿದೆ. ಈ ವೇಳೆ ವಿದ್ಯಾರ್ಥಿಗಳು ಪ್ರಾರ್ಥನೆ ಮಾಡುತ್ತಿದ್ದರು. ಸುಮಾರು 50 ವರ್ಷಗಳಷ್ಟು ಹಳೆಯದಾದ ಶಾಲಾ ಕಟ್ಟಡದಲ್ಲಿ ಈ ಘಟನೆ ಸಂಭವಿಸಿದ್ದು ಯಾವುದೇ ದುರ್ಘಟನೆಗಳು ಸಂಭವಿಸಿಲ್ಲ.

ಈ ಮೊದಲು ಇಲ್ಲಿ ಖಜಾನೆ ಕಚೇರಿ ಇತ್ತು. ಶಾಲಾ ಮೇಲ್ಛಾವಣಿ ದುರಸ್ಥಿಗೊಳಿಸುವಂತೆ ಸಾಕಷ್ಟು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಮೇಲಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿರಲಿಲ್ಲ. 450 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಶಾಲೆಯಲ್ಲಿ ಅಧ್ಯಯನ ಮಾಡುತ್ತಿದ್ದಾರೆ. ಮೇಲಧಿಕಾರಿಗಳು ಮಕ್ಕಳ ಪ್ರಾಣದ ಜೊತೆ ಚಲ್ಲಾಟವಾಡುತ್ತಿದ್ದಾರೆ. ಪ್ರಾರ್ಥನಾ ವೇಳೆ ಗೋಡೆ ಕುಸಿದು ಬಿದ್ದಿದ್ದರಿಂದ ಮಕ್ಕಳು ಶಾಲಾ ಆವರಣದಲ್ಲಿ ಪ್ರಾರ್ಥನೆ ಮಾಡುತ್ತಿದ್ದರು. ಶಾಲಾ ಅವಧಿಯಲ್ಲಿ ಬಿದ್ದಿದ್ದರೆ ಭಾರೀ ಅನಾಹುತ ಸಂಭವಿಸುತ್ತಿತ್ತು ಎಂದು ಶಿಕ್ಷಕರೊಬ್ಬರು ತಿಳಿಸಿದರು.

ರಾಜ್ಯದಲ್ಲಿ ಹಲವಾರು ಶಾಲೆಗಳು ಇಂತಹ ಶಾಲೆಗಳಿವೆ. ಆದರೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಇನ್ನು ಮುಂದಾದರೂ ಅಧಿಕಾರಿಗಳು ಮತ್ತು ಮಕ್ಕಳು ಶಿಕ್ಷಣ ಸಂಸ್ಥೆಗಳಲ್ಲಿ ತಾತ್ಸಾರ ಮನೋಭಾವನೆಯನ್ನು ಬಿಟ್ಟು ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕಿದೆ.

Comments are closed.