ಐಪಿಎಲ್ ನಲ್ಲೂ ನಾಯಕತ್ವಕ್ಕೆ ಗುಡ್ ಬೈ ಹೇಳಿದ ದೋನಿ!

ಭಾರತ ತಂಡದ ನಾಯಕತ್ವವನ್ನು ತ್ಯಜಿಸಿರುವ ಮಹೇಂದ್ರ ಸಿಂಗ್ ಧೋನಿ ಐಪಿಎಲ್‌ನಲ್ಲೂ ರೈಸಿಂಗ್ ಪುಣೆ ಸೂಪರ್ ಜೆಂಟ್ಸ್ ತಂಡದ ನಾಯಕತ್ವ ಕೈ ಬಿಟ್ಟಿದ್ದಾರೆ. ಈ ಬಗ್ಗೆ ಭಾನುವಾರ ಮಾಹಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. 10ನೇ ಆವೃತ್ತಿ ಐಪಿಎಲ್‌ನಲ್ಲಿ ತಂಡವನ್ನು ಸ್ಟೀವನ್ ಸ್ಮಿತ್ ಮುನ್ನಡೆಸಲಿದ್ದಾರೆ.

ಧೋನಿ ಚೆನ್ನೈ ತಂಡದ ಚುಕ್ಕಾಣಿ ಹಿಡಿದಾಗ ಎರಡು ಬಾರಿ ತಂಡ ಐಪಿಎಲ್ ಚಾಂಪಿಯನ್ ಆಗಿತ್ತು. ಅಲದೆ ಚಾಂಪಿಯನ್ಸ್ ಟ್ರೋಫಿಯನ್ನು ಎತ್ತಿ ಹಿಡಿದಿತ್ತು. ಯಶಸ್ವಿ ನಾಯಕರ ಸಾಲಿನಲ್ಲಿ ನಿಲ್ಲುವ ಧೋನಿ ಒಬ್ಬ ಆಟಗಾರನಾಗಿ ತಂಡದಲ್ಲಿ ಮುಂದುವರೆಯಲಿದ್ದಾರೆ.

ಕಳ್ಳಾಟಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಚೆನ್ನೈ ಸೂಪರ್ ಕಿಂಗ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳನ್ನು ಎರಡು ವರ್ಷ ವಜಾ ಮಾಡಿತ್ತು. ಈ ಎರಡು ತಂಡಗಳಿಂದ ತೆರವಾದ ಸ್ಥಾನವನ್ನು ಪುಣೆ ಹಾಗೂ ಗುಜರಾತ್ ಲಯನ್ಸ್ ತಂಡಗಳು ತುಂಬಿದ್ದವು. ಕಳೆದ ವರ್ಷದ ಐಪಿಎಲ್‌ನಲ್ಲಿ ಧೋನಿ ಪುಣೆ ತಂಡದ ನಾಯಕತ್ವವನ್ನು ನಿರ್ವಹಿಸಿದ್ದರು. ಈ ವೇಳೆ ತಂಡ ಕಳಪೆ ಪ್ರದರ್ಶನವನ್ನು ನೀಡಿತ್ತು. 9ನೇ ಆವೃತ್ತಿಯಲ್ಲಿ ಪುಣೆ ಆಡಿದ 14 ಪಂದ್ಯಗಳಲ್ಲಿ 5 ರಲ್ಲಿ ಜಯ ಸಾಧಿಸಿತ್ತು. ಉಳಿದ ಪಂದ್ಯಗಳನ್ನು ಕೈ ಚೆಲ್ಲಿತ್ತು. ಧೋನಿ ಕಳೆದ ಐಪಿಎಲ್‌ನಲ್ಲಿ ಆಡಿದ 12 ಇನಿಂಗ್ಸ್‌ಗಳಲ್ಲಿ ಕೇವಲ 284 ರನ್ ಸೇರಿಸಿದ್ದಾರೆ. ಧೋನಿ ಅವರಿಂದ ತೆರವಾದ ಸ್ಥಾನವನ್ನು ಆಸ್ಟ್ರೇಲಿಯಾ ತಂಡದ ಯುವ ನಾಯಕ ಸ್ಟೀವನ್ ಸ್ಮಿತ್ ತುಂಬಲಿದ್ದಾರೆ ಎಂದು ಪುಣೆ ಮಾಲೀಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.