ಪಂಚರಾಜ್ಯ ಚುನಾವಣೆ- ರಾಜ್ಯದ ಮೇಲೆ ಪ್ರಭಾವ ಬೀರಲಿದೆ!

ಉತ್ತರ ಪ್ರದೇಶ ವಿಧಾನ ಸಭಾ ಚುನಾವಣೆಯಲ್ಲಿ ಕಂಡ ಬಿಜೆಪಿ ಗೆಲುವು ಮುಂದಿನ ಕರ್ನಾಟಕ ಚುನಾವಣೆಯ ಮೇಲೂ ಪ್ರಭಾವ ಬೀರಲಿದೆ.  ಇಂಥದ್ದೇ ಅಭೂತ ಪೂರ್ವ ಯಶಸ್ಸನ್ನು ಕರ್ನಾಟಕದಲ್ಲೂ ಬಿಜೆಪಿ ಗಳಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಭವಿಷ್ಯ ನುಡಿದಿದ್ದಾರೆ.
ಕರ್ನಾಟಕದ ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಬಿಎಸ್‌ ಯಡಿಯೂರಪ್ಪ ನೇತೃತ್ವದಲ್ಲಿ ತಮ್ಮ ಪಕ್ಷ 150ಕ್ಕೂ ಹೆಚ್ಚು ಸ್ಥಾನದಲ್ಲಿ ಗೆಲುವು ಕಾಣಲಿದ್ದೇವೆ. ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ಉತ್ತರ ಪ್ರದೇಶ ಮತ್ತು ಉತ್ತರಾಖಂಡ್‌ನಲ್ಲಿಯ ಬಿಜೆಪಿ ಗೆಲುವಿಗೆ ಸಂತಸ ವ್ಯಕ್ತಪಡಿಸಿದ್ದಾರೆ. ಮತ್ತು ಗೋವಾ, ಮಣಿಪುರಗಳಲ್ಲಿಯೂ ಬಿಜೆಪಿ ಸಾಧನೆ ಉತ್ತಮವಾಗಿಯೇ ಇದೆ ಎಂದು ಅವರು ತಿಳಿಸಿದ್ದಾರೆ.

Comments are closed.

Social Media Auto Publish Powered By : XYZScripts.com