ಕಾಂಗ್ರೆಸ್‌ ಹೈಕಮಾಂಡ್‌ ಖಜಾನೆ ಸೇರಿದೆ ರಾಜ್ಯದ ಹಣ : ಬಿ.ಎಸ್‌ ಯಡಿಯೂರಪ್ಪ ಆರೋಪ

ಮೈಸೂರು: ಕಾಂಗ್ರೆಸ್ ಹೈಕಮಾಂಡ್ ರಾಜ್ಯದ ಸಚಿವರಿಂದ ನೂರಾರು ಕೋಟಿ ರೂಪಾಯಿ ಕಪ್ಪ ಕಾಣಿಕೆ ಪಡೆದುಕೊಂಡಿದೆ ಎಂಬ ತನ್ನ ಆರೋಪ ನೂರಕ್ಕೆ ನೂರು ಸತ್ಯ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಹೇಳಿದ್ದಾರೆ. ಮಾರ್ಚ್‌21ರಂದು ಮೈಸೂರಿನಲ್ಲಿ ಮಾತನಾಡಿದ ಯಡಿಯೂರಪ್ಪ, ರಾಜ್ಯ ಖಜಾನೆಯಿಂದ ಕಾಂಗ್ರೆಸ್‌ ಹೈಕಮಾಂಡ್‌ಗೆ ಹಣ ಸಲ್ಲಿಕೆಯಾಗುತ್ತಿದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಇನ್ನು, ಗೋವಿಂದರಾಜು ಮನೆಯಲ್ಲಿ ಸಿಕ್ಕಿರುವ ಡೈರಿ ಪ್ರಕರಣದ ಕುರಿತು ಮಾತನಾಡಿ, ಡೈರಿ ನಕಲಿ ಎಂದು ವಿಧಿವಿಜ್ಞಾನ ಪ್ರಯೋಗಾಲಯ ವರದಿ ನೀಡಿದೆ ಎನ್ನುವುದು ಮೂರ್ಖತನದ ಪರಮಾವಧಿ ಎಂದರು.
ಈ ವಿಚಾರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ತಲೆಬುಡವಿಲ್ಲದ ರೀತಿ ಮಾತನಾಡುತ್ತಿದ್ದಾರೆ ಎಂದು ಯಡಿಯೂರಪ್ಪ ಗುಡುಗಿದ್ದಾರೆ.

ಸ್ಟೀಲ್ ಬ್ರಿಡ್ಜ್ ಗುತ್ತಿಗೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬ ಸದಸ್ಯರಿಗೆ 65 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದಿರುವುದು ಗೋವಿಂದರಾಜುಗೆ ಸೇರಿದ ಡೈರಿಯಲ್ಲಿ  ಉಲ್ಲೇಖವಾಗಿದೆ.  ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಲಿತರಾಗಿದ್ದಾರೆ. ಎಂದು ಬಿ.ಎಸ್‌.ವೈ ವಿಶ್ಲೇಷಿಸಿದ್ದಾರೆ. ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಕತ್ತಿದ್ದರೆ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಿ ಎಂದು ಬಿ.ಎಸ್ ವೈ ಸವಾಲು ಹಾಕಿದ್ದಾರೆ.

Comments are closed.

Social Media Auto Publish Powered By : XYZScripts.com