ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಬಗೆಹರಿಸುವಲ್ಲಿ ಸರ್ಕಾರ ವಿಫಲ :ಬಿ.ಎಸ್‌ ಯಡಿಯೂರಪ್ಪ..

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಬಗೆಹರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಎಲ್ಲಾ ಸಮಸ್ಯೆಗಳಿಗೂ ಕೇಂದ್ರದತ್ತ ಬೊಟ್ಟು ಮಾಡುವುದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೆಲಸ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರಾಜ್ಯಸರ್ಕಾರವನ್ನ ಟೀಕಿಸಿದ್ದಾರೆ. ರಾಜ್ಯದಲ್ಲಿ ಎದುರಾಗಿರುವ ಭೀಕರ ಬರಪರಿಸ್ಥಿತಿ ನಿಭಾಯಿಸುವಲ್ಲೂ ರಾಜ್ಯ ಸರ್ಕಾರ ಸೋತಿದೆ, ರೈತರ ಸಾಲ ಮನ್ನಾ ಮಾಡುವ ವಿಚಾರದಲ್ಲಿಯೂ ಸರ್ಕಾರ ಸ್ಪಷ್ಟ ನಿರ್ಧಾರಕ್ಕೆ ಬರುತ್ತಿಲ್ಲ ಯಡಿಯೂರಪ್ಪ ಎಂದು ವಾಗ್ದಾಳಿ ನಡೆಸಿದ್ದಾರೆ.
ಬೈ ಎಲೆಕ್ಷನ್‌ಗಳ ಬಗ್ಗೆ ಮಾತನಾಡಿದ ಯಡಿಯೂರಪ್ಪ, ನಂಜನಗೂಡು, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿಗೆ ಪೂರಕ ವಾತಾವರಣ ನಿರ್ಮಾಣವಾಗಿದೆ.  ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿಧಾನಮಂಡಲದ ಅಧಿವೇಶನದಲ್ಲಿ ಮಾಧ್ಯಮಗಳಿಗೆ ಕಡಿವಾಣ ಹಾಕಬೇಕೆಂಬ ಒತ್ತಾಯಗಳು ಕೇಳಿ ಬಂದಿರುವ ಬಗ್ಗೆ ಯಡಿಯೂರಪ್ಪ, ಸ್ಪಷ್ಟ ಉತ್ತರ ನೀಡಲು ನಿರಾಕರಿಸಿ,
ಈ ಬಗ್ಗೆ ಮಾಧ್ಯಮಗಳು ಒಳ್ಳೆಯ ರೀತಿಯಲ್ಲಿ ಚಿಂತಿಸಬೇಕು ಎಂದು ಸಲಹೆ ನೀಡಿದರು. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಮಾಧ್ಯಮಗಳು ಪ್ರಜಾಪ್ರಭುತ್ವದ ನಾಲ್ಕು ಪ್ರಮುಖ ಅಂಗಗಳಾಗಿವೆ ಎಲ್ಲವೂ ಒಂದಕ್ಕೊಂದು ಪೂರಕವಾಗಿ ಸಾಗಬೇಕು ಎಂದು ಪ್ರತಿಪಾದಿಸಿದರು.

Comments are closed.