ಸದ್ಯದಲ್ಲೇ ನಾನು ಬಿಜೆಪಿ ಗೆ ಸೇರ್ಪಡೆಯಾಗಲಿದ್ದೇನೆ : ಕಾಗಲವಾಡಿ ಎಂ ಶಿವಣ್ಣ

ಮೈಸೂರು: ಮಾರ್ಚ್‌೨೫, ಸದ್ಯದಲ್ಲೇ ನಾನು ಭರತೀಯ ಜನತಾ ಪಾರ್ಟಿಗೆ ಸೇರ್ಪಡೆಯಾಗಲಿದ್ದೇನೆ ಎಂದು ಮಾಜಿ ಸಂಸದ ಕಾಗಲವಾಡಿ ಎಂ ಶಿವಣ್ಣ ಶನಿವಾರ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ತನ್ನನ್ನು ಕಡೆಗಣಿಸಲಾಗಿದೆ. ಹೀಗಾಗಿ ಪಕ್ಷ ತೊರೆಯುವ ನಿರ್ಧಾರಕ್ಕೆ ಬಂದಿದ್ದೇನೆ ಎಂದು ಶಿವಣ್ಣ ತಿಳಿಸಿದ್ದಾರೆ.  ನಂಜನಗೂಡು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೂ ಮುನ್ನವೇ ನಾನು ಬಿಜೆಪಿ ಗೆ ಸೇರ್ಪಡೆಯಾಗುತ್ತೇನೆ ಎಂದು ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಕಾಂಗ್ರೆಸ್ ಬಗ್ಗೆ ಬೇಸರ ವ್ಯಕ್ತಪಡಿಸಿ ಮಾತನಾಡಿದ ಶಿವಣ್ಣ,  ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿ ಇಲ್ಲ, ಅಲ್ಲಿಯ ಪರಿಸ್ಥಿತಿ ಹದಗೆಟ್ಟಿದೆ, ಹಿರಿಯ ಮುಖಂಡರನ್ನ ಅಲ್ಲಿ ಕಡೆಗಣಿಸಲಾಗುತ್ತಿದೆ ಹೀಗಾಗಿ ತಾನು ಕಾಂಗ್ರೆಸ್‌ ತೊರೆಯಲು ನಿರ್ಧರಿಸಿದ್ದೇನೆ ಎಂದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮತ್ತು ಸಂಸದೆ ಶೋಭಾ ಕರಂದ್ಲಾಜೆಯವರ ಜತೆ ಮಾತುಕತೆ ನಡೆಸಿದ ಬಳಿಕ ಕಾಗಲವಾಡಿ ಶಿವಣ್ಣ ಬಿಜೆಪಿ ಸೇರುವ ತಮ್ಮ ಇಂಗಿತವನ್ನ ಬಹಿರಂಗಗೊಳಿಸಿದ್ದಾರೆ.

Comments are closed.