Kalburgi firing : ಪೊಲೀಸರ ಮೇಲೆ ಹಲ್ಲೆಗೆ ಯತ್ನ: ಪರಾರಿಯಾಗುತ್ತಿದ್ದ ಆರೋಪಿ ಮೇಲೆ ಫೈರಿಂಗ್‌..

ಕಲಬುರಗಿ:  ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಕಲಬುರಗಿ ಹೊರವಲಯದ ಭೋಸ್ಗಾ ಕೆರೆ ಬಳಿ ಸೋಮವಾರ ನಡೆದಿದೆ. ಹಲ್ಲೆ ಪ್ರಕರಣದ ಮಾರಕಾಸ್ತ್ರಗಳ ಜಪ್ತಿಗೆ ಆರೋಪಿಯೊಂದಿಗೆ ತೆರಳಿದ್ದಾಗ, ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ.
ಆರೋಪಿ ವಿಕ್ರಂ ಮಾಲಗತ್ತಿ (24) ಕಾಲಿಗೆ ಗಂಭೀರ ಗಾಯವಾಗಿದ್ದು, ಈತನನ್ನ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈತ ರೌಡಿ ಶೀಟರ್ ಶ್ರೀಕಾಂತ್‌ರೆಡ್ಡಿ ಮೇಲೆ ನಡೆದ ಹಲ್ಲೆ ಪ್ರಕರಣ‌ದ ಆರೋಪಿ ಕೂಡ ಹೌದು. ಕಲಬುರಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.

Social Media Auto Publish Powered By : XYZScripts.com