ಸಂವಿಧಾನ ಶಿಲ್ಪಿಯ ಜನ್ಮಾದಿನಾಚರಣೆ : ಡಾ.ಅಂಬೇಡ್ಕರ್‌ಗೆ ಸಿ.ಎಂ ಪುಷ್ಪಾರ್ಪಣೆ…

ಬೆಂಗಳೂರು:  ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 126 ನೇ ಜನ್ಮದಿಂದ ಪ್ರಯುಕ್ತ ರಾಜ್ಯಸರ್ಕಾರ ಶುಕ್ರವಾರ ಕಾರ್ಯಕ್ರಮವನ್ನ ಹಮ್ಮಿಕೊಂಡಿದ್ದು, ವಿಧಾನಸೌಧದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಷ್ಪಾರ್ಪಣೆ ಮಾಡಿದರು.
ಸಮಾಜ ಕಲ್ಯಾಣ ಸಚಿವ ಹೆಚ್.ಆಂಜನೇಯ, ಸಂಸದ ಕೆ.ಹೆಚ್.ಮುನಿಯಪ್ಪ ಹಾಗು ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಅವರೂ ಕೂಡ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಪಣೆ ಮಾಡುವ ಮೂಲಕ ಸಂವಿಧಾನ ಶಿಲ್ಪಿಗೆ ಗೌರವ ಸಲ್ಲಿಸಿದರು.

Comments are closed.