ಮುಂದಿನ ಚುನಾವಣೆಯಲ್ಲಿ 150 ಕ್ಷೇತ್ರಗಳನ್ನ ಗೆಲ್ಲುತ್ತೇವೆ: ಯಡಿಯೂರಪ್ಪ…

ಮೈಸೂರು:  ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಗುರಿ ಹೊಂದಿದೆ, ಇದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌ ಯಡಿಯೂರಪ್ಪ ಹೇಳಿದ್ದಾರೆ. ಸೋಮವಾರ ಮೈಸೂರಿನಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಖಂಡಿತ ಬಿಜೆಪಿ 150 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ,  ಬೇರೆ ಪಕ್ಷಗಳ ತಂತ್ರಗಾರಿಕೆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ.
 ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ರ ಜೊತೆ ಚರ್ಚಿಸಿದ ಬಳಿಕವೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುತ್ತದೆ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.  ಮುಂಬರುವ ದಿನಗಳಲ್ಲಿ ಅನ್ಯ ಪಕ್ಷಗಳ ಮತ್ತಷ್ಟು ಪ್ರಮುಖ ನಾಯಕರು ಬಿಜೆಪಿ ಗೆ ಸೇರಲಿದ್ದಾರೆ, ಪಕ್ಷದ ತತ್ವ ಸಿದ್ಧಾಂತ ನಂಬಿ ಬರುವವರಿಗೆ ಸ್ವಾಗತವಿದೆ ಎಂದು ಯಡಿಯೂರಪ್ಪ ಬಿಜೆಪಿಗೆ ಕರೆ ನೀಡಿದ್ದಾರೆ.  ಯಡಿಯೂರಪ್ಪ ಮಾತಿನ ಪ್ರಕಾರ, ಬಿಜೆಪಿ ಸೇರಲಿರುವ ಬೇರೆ ಪಕ್ಷದ ಮುಖಂಡರು ಯಾರ‍್ಯಾರಿರಬಹುದು ಎಂಬ ಚರ್ಚೆಗಳು ಈಗಾಗಲೇ ಆರಂಭವಾಗಿವೆ.

One thought on “ಮುಂದಿನ ಚುನಾವಣೆಯಲ್ಲಿ 150 ಕ್ಷೇತ್ರಗಳನ್ನ ಗೆಲ್ಲುತ್ತೇವೆ: ಯಡಿಯೂರಪ್ಪ…

Comments are closed.

Social Media Auto Publish Powered By : XYZScripts.com