ಮುನಿಸಿಕೊಂಡಿದ್ದ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಜತೆ ಸಿಎಂ ಚರ್ಚೆ: ಮನವೊಲಿಕೆ ಯಶಸ್ವಿ….

ಬೆಂಗಳೂರು  : ಕಾಂಗ್ರೆಸ್ ಪಕ್ಷದಲ್ಲಿ ಮುನಿಸಿಕೊಂಡ ನಾಯಕರ ಮನವೊಲಿಕೆಗೆ ಸಿಎಂ ಸಿದ್ದರಾಮಯ್ಯ ಮುಂದಾಗುತ್ತಿದ್ದು, ಅಸಮಾಧಾನಗೊಂಡಿದ್ದ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನ ಸಮಾಧಾನಪಡಿಸುವಲ್ಲಿ ಸಿಎಂ ಯಶಸ್ವಿಯಾಗಿದ್ದಾರೆ. ಶ್ರೀನಿವಾಸ್ ಪ್ರಸಾದ್ ಅವರು ಪಕ್ಷ ತೊರೆಯುವ ಮುನ್ನವೇ ನಾನೇ ರಾಜೀನಾಮೆ ನೀಡ್ಬೇಕಿತ್ತು. ಅಂತಹ ವಾತಾವರಣ ನಿರ್ಮಾಣವಾಗಿತ್ತು ಎಂಬ ಹೇಳಿಕೆ ನೀಡುವ ಮೂಲಕ ಮಾಜಿ ಸಚಿವ ಸತೀಶ್ ಜಾರಕಿಹೊಳಿ ತಮ್ಮ ಅಸಮಧಾನ ಹೊರಹಾಕಿದ್ದರು.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸತೀಶ್ ಜಾರಕಿಹೊಳಿ ಅವರನ್ನ ತಮ್ಮ ನಿವಾಸಕ್ಕೆ ಕರೆಸಿಕೊಂಡು ಸುಮಾರು 1ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ. ಈ ವೇಳೆ ಅಸಮಧಾನಕ್ಕೆ ಕಾರಣಗಳನ್ನ ಆಲಿಸಿದ ಸಿಎಂ ಸಿದ್ದರಾಮಯ್ಯ ಬೆಳಗಾವಿ ಜಿಲ್ಲೆಯ ಎಲ್ಲಾ ಮುಖಂಡರನ್ನ ಕರೆಸಿ ಮಾತನಾಡುತ್ತೇನೆಂದು ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆದಿದೆ.

Comments are closed.

Social Media Auto Publish Powered By : XYZScripts.com