ಕೊಯ್ನಾದಿಂದ 3 ಟಿಎಂಸಿ ನೀರು ಹರಿಸಲು ರಾಜ್ಯ ಸರ್ಕಾರ ಮನವಿ ಮಾಡಿದೆ : ಡಾ.ಎಂ.ಬಿ ಪಾಟೀಲ್‌

ವಿಜಯಪುರ : ಮಹಾರಾಷ್ಟ್ರದ ಕೊಯ್ನಾದಿಂದ 3 ಟಿಎಂಸಿ ನೀರು ಹರಿಸಲು ರಾಜ್ಯ ಸರಕಾರದಿಂದ ಮನವಿ ಮಾಡಿದೆ ಎಂದು ರಾಜ್ಯ ಜಲಸಂಪನ್ಮೂಲ ಸಚಿವ ಡಾ.ಎಂ.ಬಿ ಪಾಟೀಲ್‌ ಗುರುವಾರ ತಿಳಿಸಿದ್ದಾರೆ. ವಿಜಯಪುರದ ಬಳೂತಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಈ ಬಗ್ಗೆ ಮಾತನಾಡಿದ ಅವರು, ಕೇಂದ್ರ ಸಚಿವ ಅನಂತಕುಮಾರ ಮುಖಾಂತರ ಮಹಾರಾಷ್ಟ್ರ ಸಿಎಂ ಜೊತೆ ಮಾತುಕತೆ ನಡೆಸಿ ನೀರು ಬಿಡಲು ಮನವಿ ಮಾಡಿದ್ದೇವೆ, ಒಂದು ವಾರದಲ್ಲಿ ೨.೫ ಟಿಎಂಸಿ ನೀರು ಬಿಡುವ ಸಾಧ್ಯತೆ ಇದೆ ಎಂಬ ಸಿಹಿ ಸುದ್ದಿ ನೀಡಿದ್ದಾರೆ.
ಇದರಿಂದ ವಿಜಯಪುರ – ಬಾಗಲಕೋಟ ಅವಳಿ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಸಿಗಲಿದೆ.  ಪಯಾ೯ಯವಾಗಿ ಮಹಾರಾಷ್ಟ್ರದ ಸೋಲಾಪುರ ಪಟ್ಟಣಕ್ಕೆ ನಾರಾಯಣಪುರ ಜಲಾಶಯದಿಂದ ಕುಡಿಯುವ ನೀರು ಒದಗಿಸಲು ಬೇಡಿಕೆ ಇಡುವ ಸಾಧ್ಯತೆ ಇದ್ದು, ಭವಿಷ್ಯದಲ್ಲಿ ತುಬ್ಚಿ ಏತನೀರಾವರಿ ಮೂಲಕ ಸೋಲಾಪುರಕ್ಕೆ ನೀರು ಕೊಡಲು ಪ್ರಯತ್ನ ಮಾಡುವುದಾಗಿ ಭರವಸೆ ನೀಡಲಾಗಿದೆ ಎಂದು ತಿಳಿದುಬಂದಿದೆ.

Comments are closed.