ಇಂದಿನಿಂದ ಲಾಲ್‌ಬಾಗ್‌ನಲ್ಲಿ ಮಾವು, ಹಲಸು ಮೇಳ : ಮುಖ್ಯಮಂತ್ರಿಗಳಿಂದ ಚಾಲನೆ…

ಬೆಂಗಳೂರು: ಬೆಂಗಳೂರಿನ ಲಾಲ್ ಬಾಗ್ನಲ್ಲಿ ಮಾವು ಹಾಗೂ ಹಲಸು ಮೇಳ ಶುಕ್ರವಾರದಿಂದ ಆರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಳಕ್ಕೆ ಚಾಲನೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ  ಮತ್ತು ಮಾರುಕಟ್ಟೆ ನಿಗಮ ಮತ್ತು  ತೋಟಗಾರಿಕೆ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಈ ಮೇಳ ಸಾಕಷ್ಟು ಮಾವು ಹಲಸು ಪ್ರಿಯರನ್ನ ಸೆಳೆಯುತ್ತಿದೆ.
 ಚಾಲನೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಖುಷಿಯಿಂದ ಹಲಸಿನ ಹಣ್ಣಿನ ಹಲ್ವಾವನ್ನ ಸವಿದರು,  ಕಾರ್ಯಕ್ರಮದ ವೇಳೆ ತೋಟಗಾರಕೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಸೇರಿದಂತೆ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Comments are closed.