Mysore ; ಬಿಜೆಪಿ ಕಾರ್ಯಕಾರಿಣಿಗೆ ಅಂತಿಮ ತೆರೆ, ಎರಡು ನಿರ್ಣಯಗಳನ್ನು ಅಂಗೀಕಾರ …

 ನಾಯಕರ ನಡುವಿನ ಭಿನ್ನಾಭಿಪ್ರಾಯ ಬಗೆಹರಿಯದಿದ್ದರು 2 ಪ್ರಮುಖ ನಿರ್ಣಯಗಳನ್ನು ಅಂಗೀಕಾರ ಮಾಡಿ ರಾಜ್ಯ ಬಿಜೆಪಿ ಕಾರ್ಯಕಾರಿಣಿಗೆ ಅಂತಿಮ ತೆರೆ ಬಿದ್ದಿದೆ.
ಮೈಸೂರಿನ ರಾಮಾನುಜ ರಸ್ತೆಯಲ್ಲಿರುವ ರಾಜೇಂದ್ರ ಕಲಾಮಂದಿರದಲ್ಲಿ ಎರಡು ದಿನಗಳಿಂದ ನಡೆದ ಬಿಜೆಪಿ ರಾಜ್ಯಕಾರಿಣಿ ಸಭೆಯಲ್ಲಿ ಎರಡು ಪ್ರಮುಖ ನಿರ್ಣಯಗಳನ್ನು ಅಂಗೀಕಾರ ಮಾಡಿದ್ದಾರೆ.
ರಾಜ್ಯದಲ್ಲಿ ಎದುರಾಗಿರುವ ಭೀಕರ ಬರಗಾಲ ಪರಿಸ್ಥಿತಿ ಹಾಗೂ ಇದನ್ನು ಎದುರಿಸುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಆರಂಭಿಸುವ ಬಗ್ಗೆ ಮೊದಲ  ನಿರ್ಣಯ ಅಂಗೀಕಾರವಾಗಿದೆ. ಮತ್ತು ಪ್ರಸಕ್ತ ರಾಜ್ಯ ರಾಜಕೀಯ ಬೆಳವಣಿಗೆ ಹಾಗೂ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಅನುಸರಿಸಬೇಕಾದ ರಣತಂತ್ರದ ಕುರಿತು ನಿರ್ಣಯ ಅಂಗೀಕಾರ ಮಾಡಲಾಗಿದೆ.

Comments are closed.