Mangaluru : ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಕೇರಳ ಬಸ್ :2 ಸಾವು 20 ಮಂದಿಗೆ ಗಾಯ

ಮಂಗಳೂರು ;  ಇಲ್ಲಿನ ಬೆಳ್ತಂಗಡಿ ಸಮೀಪದ ಚಾರ್ಮಾಡಿ ಘಾಟ್‌ನಲ್ಲಿ ಮಂಗಳವಾರ ಮಧ್ಯಾಹ್ನ ಕೇರಳದ ಖಾಸಗಿ ಬಸ್ ಪ್ರಪಾತಕ್ಕೆ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟು, 20 ಪ್ರಯಾಣಿಕರು ಗಾಯಗೊಂಡಿದ್ದಾರೆ.ಚಾರ್ಮಾಡಿ ಘಾಟ್‌ನ 3 ನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪ್ರಪಾತಕ್ಕೆ ಬಿದ್ದಿದೆ. ಈ ವೇಳೆ ಸ್ಥಳೀಯರು ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಬೆಳ್ತಂಗಡಿ ಠಾಣಾ ಪೊಲೀಸರು ತಿಳಿಸಿದ್ದಾರೆ. ಇದೀಗ ಕ್ರೇನ್‌ ಮೂಲಕ ಬಸ್ಸನ್ನು ಮೇಲಕ್ಕೆ ಎತ್ತಲಾಗಿದೆ.

Comments are closed.

Social Media Auto Publish Powered By : XYZScripts.com