ಜಂತಕಲ್ ಮೈನಿಂಗ್ ಕೇಸ್ : ವಿಚಾರಣೆ ಎದುರಿಸಿದ್ದೆನೆ, ಬಂಧನದ ಭಯವಿಲ್ಲ- ಮಾಜಿ ಸಿಎಂ HDK

ಬೆಂಗಳೂರು  : ಜಂತಕಲ್ ಮೈನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎಸ್ ಐಟಿ ವಿಚಾರಣೆ ನಡೆಸಿದ್ದು, ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ ಎಂದು ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೆ 7 ದಿನಗಳವರೆಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಪಡೆದಿದ್ದ ಹೆಚ್.ಡಿ ಕುಮಾರಸ್ವಾಮಿ ಅವರು ಇಂದು ಎಸ್ ಐಟಿ ವಿಚಾರಣೆಗೆ ಹಾಜರಾಗಿದ್ದರು. ಸುಮಾರು 2 ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು.

ವಿಚಾರಣೆ ಬಳಿಕ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಎಸ್ ಐಟಿ ಅಧಿಕಾರಿಗಳು ಸುಮಾರು 2 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಅವರು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ. ನನಗೆ ಯಾವುದೇ ಬಂಧನ ಭೀತಿಯಿಲ್ಲ. ಇನ್ನು ಮತ್ತೆ ವಿಚಾರಣೆ ನಡೆಸಬೇಕಾದರೇ ಮೂರು ದಿನಗಳ ಮುನ್ನವೇ ನೋಟೀಸ್ ನೀಡಿ ಎಂದು ಹೇಳಿದ್ದೇನೆ ಎಂದು ತಿಳಿಸಿದರು.

Comments are closed.