CM ವಿರುದ್ಧದ ದೂರುಗಳ ಬಗ್ಗೆ ಶೀಘ್ರದಲ್ಲಿಯೇ ತನಿಖೆ ನಡೆಸುತ್ತೇವೆ : ಲೋಕಾಯುಕ್ತ ನ್ಯಾ. ವಿಶ್ವನಾಥ್‌ ಶೆಟ್ಟಿ

ಬೆಂಗಳೂರು: ಲೋಕಾಯುಕ್ತದಲ್ಲಿ ಮುಖ್ಯಮಂತ್ರಿಗಳ ವಿರುದ್ಧ ದಾಖಲಾದ ಎಲ್ಲಾ ಪ್ರಕರಣಗಳ ತನಿಖೆ ನಡೆಯುತ್ತಿದೆ ಎಂದು ನೂತನ ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ್‌ ಶೆಟ್ಟಿ ಹೇಳಿದ್ದಾರೆ.  ಈ ಬಗ್ಗೆ ಮಾತನಾಡಿದ ಅವರು, ಒಂದೂವರೆ ವರ್ಷದಿಂದ ಲೋಕಾಯುಕ್ತ ಹುದ್ದೆ ಖಾಲಿ ಇತ್ತು,  ಹೀಗಾಗಿ ಸಾವಿರಾರು ದೂರುಗಳು ವಿಲೇವಾರಿ ಆಗಿಲ್ಲ, ತನಿಖೆ ಪ್ರಗತಿಯಲ್ಲಿದೆ ಎಂದಿದ್ದಾರೆ.
ಎಲ್ಲಾ ಅಧಿಕಾರಿಗಳ ಬಳಿಯೂ ಪ್ರಕರಣಗಳಿವೆ, ಆದರೆ ಅದು ಯಾವ ಹಂತದಲ್ಲಿದೆ ಎಂಬುದು ಗೊತ್ತಿಲ್ಲ, ತ್ವರಿತಗತಿಯಲ್ಲಿ ಕೇಸ್ ಗಳನ್ನು ತನಿಖೆ ಮಾಡಲು ಸಾಧ್ಯವಿಲ್ಲ, ಅಗತ್ಯ ದಾಖಲೆ ಸಾಕ್ಷ್ಯಾಧಾರ ಇಟ್ಕೊಂಡು ತನಿಖೆ ಮಾಡ್ಬೇಕು, ಎಲ್ಲಾಕೇಸ್ ಗಳನ್ನು ಶೀಘ್ರದಲ್ಲಿಯೇ ತನಿಖೆ ನಡೆಸುತ್ತೇವೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ್ ಶೆಟ್ಟಿ ಹೇಳಿದ್ದಾರೆ.

Comments are closed.

Social Media Auto Publish Powered By : XYZScripts.com