ಮುಖ್ಯಮಂತ್ರಿ ಫಡ್ನವೀಸ್ ಹೆಲಿಕಾಪ್ಟರ್ ಅಪಘಾತ, ಪ್ರಾಣಾಪಾಯದಿಂದ ಪಾರು..

ಲಾತೂರ್ : ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಗ್ ಸಮಯದಲ್ಲಿ ತಾಂತ್ರಿಕ ದೋಷದಿಂದಾಗಿ ಅಪಘಾತಕ್ಕೀಡಾದ ಘಟನೆ ಗುರುವಾರ ನಡೆದಿದೆ. ಮುಖ್ಯಮಂತ್ರಿ ಫಡ್ನವೀಸ್ ಸೇರಿದಂತೆ ಜೊತೆಗೆ ಪ್ರಯಾಣಿಸುತ್ತಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ .


ಅಪಘಾತದ ಸುದ್ದಿ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದ್ದಂತೆ ಫಡ್ನವೀಸ್ ಟ್ವೀಟ್ ಮಾಡಿ ತಾವು ಸುರಕ್ಷಿತರಾಗಿರುವುದಾಗಿ ತಿಳಿಸಿದ್ದಾರೆ. ‘ ನಮ್ಮ ಹೆಲಿಕಾಪ್ಟರ್ ಲಾತೂರ್ ನಲ್ಲಿ ತಾಂತ್ರಿಕ ದೋಷದಿಂದ ಲ್ಯಾಂಡ್ ಆಗುವ ವೇಳೆ ಅಪಘಾತಕ್ಕೀಡಾಗಿದೆ. ಆದರೆ ನಾನು ಮತ್ತು ನಮ್ಮ ತಂಡ ಸಂಪೂರ್ಣವಾಗಿ ಸುರಕ್ಷಿತರಾಗಿದ್ದೇವೆ  ಯಾವುದೇ ಆತಂಕ ಬೇಡ ‘ ಎಂದು ಟ್ವೀಟ್ ಮಾಡಿದ್ದಾರೆ.

Comments are closed.

Social Media Auto Publish Powered By : XYZScripts.com