ಎಂಇಎಸ್ ನಿಷೇಧಿಸಲು ಕನ್ನಡ ಪರ ಸಂಘಟನೆಗಳ ಆಗ್ರಹ

ಎಂಇಎಸ್ ನಿಷೇಧಕ್ಕೆ ಕನ್ನಡ ಪರ ಒಕ್ಕೂಟಗಳು ಆಗ್ರಹಿಸಿವೆ.
ನಾಡದ್ರೋಹಿ ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ, ಬೆಳಗಾವಿಯಲ್ಲಿ ಇಂದು ಕನ್ನಡ ಪರ ಒಕ್ಕೂಟಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯ ವರೆಗೆ ಪ್ರತಿಭಟನಾ ರ್ಯಾಲಿ ನಡೆಸಲಾಯಿತು.
ಭಾಷಾ ವಿಚಾರವನ್ನು ಮುಂದಿಟ್ಟುಕೊಂಡು ಸದಾ ಕ್ಯಾತೆ ತೆಗೆಯುವ ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕು.
ಜತೆಗೆ ಶಾಸಕರಾದ ಸಂಭಾಜೀ ಪಾಟೀಲ್ ಹಾಗೂ ಅರವಿಂದ ಪಾಟೀಲ್ ಸದಸ್ಯತ್ವ ರದ್ದು ಮಾಡಬೇಕು ಎಂದು ಆಗ್ರಹಿಸಿಲಾಯಿತು.
ಪ್ರತಿಭಟನೆಯಲ್ಲಿ ವಾಟಾಳ್ ನಾಗರಾಜ್, ಪ್ರವೀಣ್ ಶೆಟ್ಟಿ, ಶರಣು ಗದ್ದುಗೆ, ಕೆ.ಆರ್. ಕುಮಾರ್ ಸೇರಿ ಇನ್ನಿತರು ಪಾಲ್ಗೊಂಡಿದ್ದರು.
ಇನ್ನು ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ವಾಟಾಳ್ ನಾಗರಾಜ್, ಎಂಇಎಸ್ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಜೂನ್ 12 ರಂದು ಕರ್ನಾಟಕ ಬಂದ್ ಕರೆ ನೀಡಲಾಗಿದೆ ಎಂದು ಹೇಳಿದರು.

Comments are closed.

Social Media Auto Publish Powered By : XYZScripts.com