ವಿಜಯಪುರ ವಿಶ್ವವಿದ್ಯಾಲಯಕ್ಕೆ ಅಕ್ಕಮಹಾದೇವಿಯ ಹೆಸರು: ಜೂನ್‌ 11ರಂದು ನಾಮಕರಣ ..

ಕೊಪ್ಪಳ : ಕೊಪ್ಪಳ ಜಿಲ್ಲೆಯ ವಿಜಯಪುರ ವಿಶ್ವವಿದ್ಯಾಲಯಕ್ಕೆ ಅಕ್ಕಮಹಾದೇವಿ ಎಂದು ನಾಮಕರಣ ಮಾಡಲು ಸರ್ಕಾರ ನಿರ್ಧರಿಸಿದ್ದು, ಜೂನ್‌ 11 ರಂದು ವಿಶ್ವವಿದ್ಯಾಲಯದ ನಾಮಕರಣ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಹೇಳಿದ್ದಾರೆ. ಕೊಪ್ಪಳದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,  ಇದೇ ಕಾರ್ಯಕ್ರಮದಲ್ಲಿ ಅಕ್ಕಮಹಾದೇವಿ, ಮದರ್ ಥೆರಸಾ, ಸಾವಿತ್ರಿಬಾಯಿ ಪುಲೆ, ಹೇಮರಡ್ಡಿ ಮಲ್ಲಮ್ಮ, ಕಿತ್ತೂರ ಚೆನ್ನಮ್ಮ ಸೇರಿದಂತೆ  ಏಳು ಜನ ಮಹಿಳಾ ಸಾಧಕಿಯರ ಮೂರ್ತಿಗಳನ್ನ ವಿಶ್ವವಿದ್ಯಾಲಯದ ಆವರಣದಲ್ಲಿ ಅನಾವರಣ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಈ ಕಾರ್ಯಕ್ರಮಕ್ಕೆ ಬರುವ ಜನರಿಗಾಗಿ 10 ಜಿಲ್ಲೆಗಳಿಂದ 1300 ಬಸ್ ವ್ಯವಸ್ಥೆ ಕಲ್ಪಿಸಲಾಗಿದ್ದು, ರಾಜ್ಯಾದ್ಯಂತ ಸುಮಾರು 60 ಸಾವಿರ ಜನ ಮಹಿಳೆಯರು ಪಾಲ್ಗೊಳ್ಳುವ ನೀರಿಕ್ಷೆ ಇದೆ ಎಂದಿದ್ದಾರೆ.  ಕಾರ್ಯಕ್ರಮಕ್ಕೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸೇರಿದಂತೆ ನಾಡಿನ ಎಲ್ಲ ಕಡೆಯಿಂದ 20 ಮಂದಿ ಸ್ವಾಮಿಗಳು ಹಾಗೂ ಸಾಹಿತಿಗಳು ಪಾಲ್ಗೊಳ್ಳಲಿದ್ದಾರೆ, ಎಂದು ಸುದ್ದಿಗೋಷ್ಠಿಯಲ್ಲಿ ಉನ್ನತ ಶಿಕ್ಷಣ ಸಚಿವರು ತಿಳಿಸಿದ್ದಾರೆ.

Comments are closed.

Social Media Auto Publish Powered By : XYZScripts.com