ಯಲಹಂಕದಲ್ಲಿ ಅಪರಿಚಿತರಿಂದ ಮಾರಣಾಂತಿಕ ಹಲ್ಲೆ : ಓರ್ವ ವ್ಯಕ್ತಿ ಸಾವು

ಬೆಂಗಳೂರು : ಅಪರಿಚಿತರಿಂದ ಮನೆ ಬಳಿಯಿದ್ದ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಓರ್ವ ವ್ಯಕ್ತಿ ಸ್ಥಳದಲ್ಲೆ ಸಾವನಪ್ಪಿದ್ದು ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ. ಮುನಿಯಪ್ಪ (24) ಮೃತ ದುರ್ದೈವಿ.


ಯಲಹಂಕದ ಅಂಬೇಡ್ಕರ್ ನಗರದಲಿ ಈ ಘಟನೆ‌ ನಡೆದಿದೆ.
ಇಂದು ಸಂಜೆ 6 ಗಂಟೆ ಸುಮಾರಿಗೆ ಬೈಕ್ನಲ್ಲಿ ಬಂದು ಕೊಡಲಿ ಹಾಗೂ ಮಚ್ಚಿನಿಂದ ಹಲ್ಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ರಫೀಕ್ ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಯಲಹಂಕ ಉಪನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ.

Comments are closed.

Social Media Auto Publish Powered By : XYZScripts.com