ಕಾಂಗ್ರೆಸ್‌ ಸಮಾವೇಶಕ್ಕೆ ಬರುತ್ತಿದ್ದ ಕಾರ್ಯಕರ್ತರ ಬಸ್‌ ಅಪಘಾತ : ಸಣ್ಣಪುಟ್ಟ ಗಾಯ: ತಪ್ಪಿದ ಭಾರಿ ಅನಾಹುತ

ಮೈಸೂರು:  ಮೈಸೂರಿನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶಕ್ಕೆ ಬರುತ್ತಿದ್ದ ಕಾರ್ಯಕರ್ತರ ವಾಹನ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್‌ ಅನಾಹುತ ತಪ್ಪಿದೆ. ಮೈಸೂರಿನ ಹೊರವಲಯದಲ್ಲಿ ಅಪಘಾತ ಸಂಭವಿಸಿದ್ದು,  ಮುಂದೆ ಹೋಗುತ್ತಿದ ಕ್ಯಾಂಟರ್ ಲಾರಿಗೆ ಗುದ್ದುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿದ ಬಸ್ ರಸ್ತೆ ವಿಭಜಕಕ್ಕೆ ಬಡಿದಿದೆ.
ಕಾಂಗ್ರೆಸ್ ಸಮಾವೇಶಕ್ಕೆ ಚಾಮರಾಜನಗರ ಜಿಲ್ಲೆ ಹನೂರು ಕ್ಷೇತ್ರದಿಂದ ಕಾರ್ಯಕರ್ತರನ್ನು ಕರೆದೊಯ್ಯುವಾಗ ಸಂಭವಿಸಿದ ಈ ಅಪಘಾತದಲ್ಲಿ, ಬಸ್‌ನಲ್ಲಿದ್ದ ಕಾರ್ಯಕರ್ತರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Comments are closed.

Social Media Auto Publish Powered By : XYZScripts.com