ಜೂನ್‌ 10ರಂದು ರೈತರ ಸಾಲ ಮನ್ನಾಕ್ಕೆ ಆಗ್ರಹಿಸಿ ಬ್ರಹತ್‌ ಸಮಾವೇಶ : ಬಿ.ಎಸ್‌.ವೈ ನೇತ್ರತ್ವ

ಬೆಳಗಾವಿ: ಜೂನ್‌ 10 ರಂದು ರೈತರ ಸಾಲ ಮನ್ನಾಕ್ಕೆ ಆಗ್ರಹಿಸಿ ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ, ಈ ಸಮಾವೇಶದಲ್ಲಿ ಸಾವಿರಾರು ಜನ ರೈತರು, ರೈತಪರರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.  ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ  ಬಿ.ಎಸ್. ವೈ,  ಸಚಿವ ಎಂ.ಬಿ ಪಾಟೀಲ್ , ಇಲಾಖೆ ಸಾಧನೆ ಬಗ್ಗೆ ಪತ್ರಿಕೆಯಲ್ಲಿ ಜಾಹಿರಾತು ನೀಡಿದ್ದಾರೆ.
ರಾಜ್ಯ ಸರ್ಕಾರ ನೀರಾವರಿ ಯೋಜನೆಗಳಿಗಾಗಿ 57 ಸಾವಿರ ಕೋಟಿ  ಮೀಸಲಿಟ್ಟಿದೆ. ಇದರಲ್ಲಿ 38 ಸಾವಿರ ಕೋಟಿ ಮಾತ್ರ ಖರ್ಚು ಮಾಡಲಾಗಿದೆ. ಕೃಷ್ಣ ನೀರಾವರಿಗಾಗಿ ವರ್ಷಕ್ಕೆ 10 ಸಾವಿರ ಕೋಟಿ ಖರ್ಚು ಮಾಡುತ್ತೇನೆ ಎಂದು ಸಿ.ಎಂ ಸಿದ್ದರಾಮಯ್ಯ ಹೇಳಿದ್ದರು. ಸುಳ್ಳು ಭರವಸೆ ನೀಡಿ ಸಿಎಂ ಸಿದ್ದರಾಮಯ್ಯ ಜನರನ್ನು ವಂಚಿಸುತ್ತಿದ್ದಾರೆ ಎಂದು ಬಿ.ಎಸ್‌.ವೈ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

Comments are closed.

Social Media Auto Publish Powered By : XYZScripts.com