‘ನಾನು ಕನ್ನಂಬಾಡಿ ಕಟ್ಟೆ’ ವಿರೋಧಿಸಿ ಮೌನ ಪ್ರತಿಭಟನೆ : ಪ್ರಜ್ಞಾವಂತ ನಾಗರಿಕ ವೇದಿಕೆ

ಮೈಸೂರು: ಇತಿಹಾಸ ತಜ್ಞ ಪ್ರೊ. ನಂಜರಾಜ ಅರಸ್ ರಚಿಸಿರುವ ‘ನಾನು ಕನ್ನಂಬಾಡಿ ಕಟ್ಟೆ,  ಹೀಗೊಂದು ಆತ್ಮಕತೆ’ ಕೃತಿಯಲ್ಲಿ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯನವರ ಬಗ್ಗೆ ಸಾರ್ವಜನಿಕರಲ್ಲಿ ತಪ್ಪು ಭಾವನೆ ಬರುವಂತೆ ಚಿತ್ರಿಸಲಾಗಿದೆ ಎಂದು ಆರೋಪಿಸಿ ಮೈಸೂರಿನಲ್ಲಿ ಮೌನ ಪ್ರತಿಭಟನೆ ನಡೆಸಲಾಗಿದೆ. ಮೈಸೂರಿನ ಇನ್‌ಸ್ಟಿಟ್ಯೂಟ್‌ ಆಫ್ ಎಂಜಿಯರಿಂಗ್ ಸಂಸ್ಥೆಯ ಆವರಣದಲ್ಲಿರುವ ವಿಶ್ವೇಶ್ವರಯ್ಯನವರ ಪ್ರತಿಮೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆದಿದ್ದು,  ಪ್ರಜ್ಞಾವಂತ ನಾಗರಿಕ ವೇದಿಕೆ ಪ್ರತಿಭಟನೆಯ ನೇತೃತ್ವ ವಹಿಸಿದೆ.
ನಗರಪಾಲಿಕೆ ಸದಸ್ಯ ಎಂ.ವಿ ರಾಮಪ್ರಸಾದ್ ಸೇರಿದಂತೆ ಇತರ ಪ್ರಮುಖರು ಮೌನ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

Comments are closed.