ಮೈಸೂರು : ಕೇಂದ್ರದ ದರ ಪರಿಷ್ಕರಣೆ ವಿರೋಧಿಸಿ ಪೆಟ್ರೋಲ್ ಬಂಕ್ ಗಳೆಲ್ಲ ಬಂದ್

ಮೈಸೂರು: ಪ್ರತಿನಿತ್ಯ ಪೆಟ್ರೋಲ್ ದರ ಪರಿಷ್ಕರಣೆಗೆ ಕೇಂದ್ರ ಸರ್ಕಾರ ಆದೇಶ ನೀಡಿರುವ ಹಿನ್ನೆಲೆಯಲ್ಲಿ
ಕೇಂದ್ರ ಸರ್ಕಾರದ ನಿಲುವು ವಿರೋಧಿಸಿ ಮೈಸೂರು ಜಿಲ್ಲೆಯಾದ್ಯಂತ 24 ಗಂಟೆಗಳ ಕಾಲ ಪೆಟ್ರೋಲ್‌ ಬಂಕ್‌ಗಳು ಬಂದ್ ಮಾಡಲಾಗಿದೆ.
ಮೈಸೂರು ಜಿಲ್ಲೆಯಾದ್ಯಂತ ಇರುವ 240 ಕ್ಕೂ ಹೆಚ್ಚು ಪೆಟ್ರೋಲ್ ಬಂಕ್ ಗಳು ಕಾರ್ಯ ಸ್ಥಗಿತಗೊಳಿಸಿವೆ.

ಮೈಸೂರು ಪೆಟ್ರೋಲ್ ಬಂಕ್ ಮಾಲೀಕರ ಸಂಘದಿಂದ ಪೆಟ್ರೋಲ್ ಬಂಕ್ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ.
ಕಳೆದ ಮಧ್ಯ ರಾತ್ರಿ 12 ಗಂಟೆಯಿಂದ ಇಂದು ಮಧ್ಯರಾತ್ರಿ 12 ಗಂಟೆವರೆಗೂ ಪೆಟ್ರೋಲ್ ಬಂಕ್ ಗಳು ಬಂದ್ ಆಗಿರಲಿವೆ.
ಬಂದ್ ಪರಿಣಾಮ ಪೆಟ್ರೋಲ್ ಡೀಸೆಲ್ ಸಿಗದೇ ಸಾರ್ವಜನಿಕರು ಪರದಾಡುವಂತಾಗಿದೆ.
ಎಲ್ಲಾ ಪೆಟ್ರೋಲ್ ಬಂಕ್‌ಗಳ ಬಳಿ ‌ಬಂದು ನೋಡಿಕೊಂಡು ವಾಹನ ಸವಾರರು ಹಿಂದಿರುಗುತ್ತಿದ್ದಾರೆ.

Comments are closed.