ನಮ್ಮ ಮೆಟ್ರೋ : ಉತ್ತರ-ದಕ್ಷಿಣ ಕಾರಿಡಾರ್ ಗೆ ಚಾಲನೆ ನೀಡಿದ ರಾಷ್ಟ್ರಪತಿ ಪ್ರಣಬ್ ಮುಖರ್ಜೀ

ಬೆಂಗಳೂರು : ಉದ್ಯಾನ ನಗರಿ ಬೆಂಗಳೂರಿನ ಹೆಮ್ಮೆಯ ಸಂಕೇತವಾಗಿರುವ ನಮ್ಮ ಮೆಟ್ರೋ ರಾಷ್ಟ್ರಪತಿ ಪ್ರಣಬ್ ಮುಖರ್ಜೀ ಯವರಿಂದ ಅಧಿಕೃತವಾಗಿ ಉದ್ಘಾಟನೆಗೊಂಡಿತು. ಶನಿವಾರ, ದಕ್ಷಿಣ ಭಾರತದ ಮೊದಲ ಹಂತದ ನಮ್ಮ ಮೆಟ್ರೋವನ್ನು ಉದ್ಘಾಟನೆ ಮಾಡಿದ್ದಾರೆ. ನಾಳೆಯಿಂದ ಸಾರ್ವಜನಿಕರ ಓಡಾಟಕ್ಕೆ ಮೊದಲ ಹಂತದ ನಮ್ಮ ಮೆಟ್ರೋ ಮಾರ್ಗ ಮುಕ್ತವಾಗಲಿದೆ.

ನಮ್ಮ ಮೆಟ್ರೋ ಇದೀಗ ಲೋಕಾರ್ಪಣೆಗೊಂಡಿದ್ದು,  ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಉತ್ತರ-ದಕ್ಷಿಣ ಕಾರಿಡಾರ್ ಮೆಟ್ರೋಗೆ ಚಾಲನೆ ನೀಡಿದ್ದಾರೆ. ಎಲ್ಲ ಭಾಗಗಳಿಗೂ ಸಂಪರ್ಕ ಕಲ್ಪಿಸುವ ಕೆಂಪೇಗೌಡ ಮೆಟ್ರೋ ನಿಲ್ದಾಣ, ದೇಶದ ಅತಿ ದೊಡ್ಡ ಮೆಟ್ರೋ ನಿಲ್ದಾಣ  ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

ಒಟ್ಟು 42.3 ಕೀಲೋ ಮೀಟರ್ ದೂರ ಮೆಟ್ರೋ ಸಂಚರಿಸಲಿದ್ದು, ಇದರಲ್ಲಿ 8.8 ಕಿಲೋ ಮೀಟರ್ ದೂರದವರೆಗೆ ಸುರಂಗ ಮಾರ್ಗವಿದೆ,  33.42 ಕಿಲೋ ಮೀಟರ್ ದೂರದವರೆಗೆ ಎತ್ತರಿಸಿದ ಮಾರ್ಗದಲ್ಲಿ ಮೆಟ್ರೋ ಸಂಚರಿಸಲಿದೆ. ಒಟ್ಟು 40 ಮೆಟ್ರೋ ನಿಲ್ದಾಣಗಳಿದ್ದು, ಈ ಎಲ್ಲ ಯೋಜನೆಗಳಿಗೂ ಇದೂವರೆಗೆ ತಗುಲಿದ ಒಟ್ಟು ವೆಚ್ಚ 14,291 ಕೋಟಿ ರೂಪಾಯಿ.

ಇನ್ನು ನಮ್ಮ ಮೆಟ್ರೋ ಪ್ರಮುಖ ವಿಶೇಷತೆ ಏನೆಂದರೆ ಅದರ ಮೆಜೆಸ್ಟಿಕ್ ನಿಲ್ದಾಣ. ಇದು ಸುಮಾರು 6 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿದ್ದು, ಒಂದೇ ಸಮಯದಲ್ಲಿ 70 ಸಾವಿರ ಪ್ರಯಾಣಿಕರು ಬರಬಹುದಾಗಿದೆ.  ಸಿಟಿ ರೈಲ್ವೇ ನಿಲ್ದಾಣ, ಬಿಎಂಟಿಸಿ ನಿಲ್ದಾಣ, ಮತ್ತು ಕೆಎಸ್‍ಆರ್‍ಟಿಸಿ ನಿಲ್ದಾಣ ದಿಂದ ನೇರವಾಗಿ ಮೆಜೆಸ್ಟಿಕ್‍ನ ಈ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಕರು ಬರಬಹುದಾದಂತಹ ಸೌಲಭ್ಯವನ್ನು ಇಲ್ಲಿ ಕಲ್ಪಿಸಲಾಗಿದೆ.

2 thoughts on “ನಮ್ಮ ಮೆಟ್ರೋ : ಉತ್ತರ-ದಕ್ಷಿಣ ಕಾರಿಡಾರ್ ಗೆ ಚಾಲನೆ ನೀಡಿದ ರಾಷ್ಟ್ರಪತಿ ಪ್ರಣಬ್ ಮುಖರ್ಜೀ

  • October 25, 2017 at 9:10 AM
    Permalink

    Thank you for the auspicious writeup. It in fact was a amusement account it. Look advanced to more added agreeable from you! By the way, how could we communicate?

  • October 25, 2017 at 11:07 AM
    Permalink

    May I just say what a relief to uncover someone that really understands what they’re discussing on the net. You actually realize how to bring an issue to light and make it important. More and more people have to look at this and understand this side of the story. I was surprised you’re not more popular because you surely possess the gift.

Comments are closed.