ಮಿ.ಶೋ ಆಫ್‍ ಎಂದಿದ್ದ ರಶ್ಮಿಕಾಗೆ ಯಶ್‍ ಉತ್ತರ: ಫೇಸ್‍ಬುಕ್‍ನಲ್ಲಿ ಸ್ಟೇಟಸ್‍

ಬೆಂಗಳೂರು: ಕಿರಿಕ್‍ ಪಾರ್ಟಿ ಚಿತ್ರದ ನಟಿ ರಶ್ಮಿಕಾ ಮಂದಣ್ಣ ಅವರು ಕಾರ್ಯಕ್ರಮವೊಂದರಲ್ಲಿ ನಟ ಯಶ್‍ ಅವರನ್ನು ಮಿಸ್ಟರ್‍ ಶೋ ಆಫ್‍ ಎಂದು ಕರೆದಿದ್ದರು. ಈ ವಿಷಯ ಯಶ್‍ ಅಭಿಮಾನಿಗಳಲ್ಲಿ ಅಸಮಾಧಾನ ಉಂಟು ಮಾಡಿತ್ತು. ಈಗ ಯಶ್‍ ಅವರು ಫೇಸ್‍ಬುಕ್‍ನಲ್ಲಿ ಸ್ಟೇಟಸ್‍ ಹಾಕುವ ಮೂಲಕ ಈ ಹೇಳಿಕೆ ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.

ಒಬ್ಬ ನಟನಾಗಿ ನಿಮ್ಮೆಲ್ಲರ ಪ್ರೀತಿ ಮತ್ತು ಅಭಿಮಾನವನ್ನು ಸಂಪಾದಿಸುವುದನ್ನೇ ಗುರಿಯಾಗಿಟ್ಟುಕೊಂಡು ಕೆಲಸ ಮಾಡುವ ನಾನು, ಕೆಲವೊಮ್ಮೆ ಎದುರಾಗುವ ಅನಗತ್ಯ ಎನಿಸುವ ವಿಷಯಗಳನ್ನು ನಿರ್ಲ್ಯಕ್ಷಿಸುವ ಸ್ವಭಾವವನ್ನು ರೂಢಿಸಿಕೊಂಡಿದ್ದೇನೆ. ಆದರೆ ನನ್ನನ್ನು ಪ್ರೀತಿಸುವ ನಿಮ್ಮ ಮನಸಿಗೆ ನೋವಾದಾಗ ಪ್ರತಿಕ್ರಿಯೆ ನೀಡದೆ ಇರುವುದು ನನ್ನಿಂದ ಸಾಧ್ಯವಿಲ್ಲ. ನಿಮ್ಮ ಅಭಿಮಾನ ಪ್ರೀತಿಗೆ ಬೆಲೆಕಟ್ಟಲಾಗುವುದಿಲ್ಲ, ಅದಕ್ಕೆ ನಾನೆಂದು ಚಿರಋಣಿ.

ರಶ್ಮಿಕಾ ಅವರು ವೈಯಕ್ತಿಕವಾಗಿ ನನಗೆ ಪರಿಚಿತರಲ್ಲ, ಇದುವರೆಗೂ ಭೇಟಿಯು ಮಾಡಿಲ್ಲ…ಮಾತು ಸಹ ಆಡಿಲ್ಲ.ಹಾಗೆಂದು ಅವರಿಗೆ ನನ್ನ ಬಗ್ಗೆ ಯಾವುದೇ ರೀತಿಯ ಆಭಿಪ್ರಾಯ ಇರಬಾರದೆಂದೇನಿಲ್ಲ. ಅವರ ಅಭಿಪ್ರಾಯ ಅವರದು, ಅದನ್ನು ಹೀಗಳೆಯುವ ಕೆಲಸ ಯಾರೂ ಮಾಡಬಾರದು. ಎಲ್ಲರ ಅಭಿಪ್ರಾಯವನ್ನು ಗೌರವಿಸೋಣ.

‘ಒಬ್ಬರ ಅಭಿಪ್ರಾಯ ಇನ್ನೊಬ್ಬರ ವ್ಯಕ್ತಿತ್ವವನ್ನು ನಿರ್ಧರಿಸುವುದಿಲ್ಲ’

ಈ ವಿಷಯ ಇಲ್ಲಿಗೆ ಬಿಟ್ಟುಬಿಡಿ, ಇಲ್ಲಿ ಚರ್ಚಿಸುವಂತದ್ದು ಏನೂ ಇಲ್ಲ!

ಕೆಲವೇ ದಿನಗಳಲ್ಲಿ “ಕೆ.ಜಿ.ಎಫ್‍” ಚಿತ್ರದ ಮತ್ತೊಂದು ಸ್ಟಿಲ್‍ ಬರಲಿದೆ. ಅಲ್ಲಿಯವರೆಗೆ ಈದ್‍ ಮುಬಾರಕ್‍ ಎಂದು ಹೇಳಿದ್ದಾರೆ…

Comments are closed.

Social Media Auto Publish Powered By : XYZScripts.com