ಮಹಾರಾಷ್ಟ್ರ ಕೊಂಕಣ ಭಾಗದಲ್ಲಿ ಭಾರೀ ಮಳೆ: ಕೃಷ್ಣಾ ನದಿ ಒಳ ಹರಿವು ಹೆಚ್ಚಳ

ಬೆಳಗಾವಿ: ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಕೃಷ್ಣಾ ನದಿಯ ಒಳ ಹರಿವು ಹೆಚ್ಚಿದೆ. ಮಹಾರಾಷ್ಟ್ರದ ರಾಜಾಪೂರ ಡ್ಯಾಂನಿಂದ ನೀರು ಹರಿದು ಬರುತ್ತಿದ್ದು, ನೀರಿನ ಹರಿವು ಎಂಟು ಅಡಿಯಷ್ಟು ಹೆಚ್ಚಳವಾಗಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೊಡಿ, ಅಥಣಿ, ರಾಯಭಾಗ ತಾಲೂಕು ಸೇರಿದಂತೆ ಮಾಂಜರಿ ಮತ್ತು ಸವದತ್ತಿಗೆ ಸಂಪರ್ಕ ಕಲ್ಪಿಸುವ ಸೇತುವೆಯಲ್ಲೂ ನೀರಿನ ಹರಿವು ಹೆಚ್ಚಿದೆ. ಅಲ್ಲದೇ ಮಧ್ಯರಾತ್ರಿ ವೇಳೆ ನೀರಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹಿಪ್ಪರಿಗೆ ಬ್ಯಾರೇಜ್‍ ಗೇಟ್‍ನ್ನು ಅಧಿಕಾರಿಗಳು ತೆರೆದಿದ್ದಾರೆ.

ಸದ್ಯಕ್ಕೆ ನದಿಪಾತ್ರದಲ್ಲಿ ವಾಸಿಸುತ್ತಿರುವ ಜನರು ಭಯಪಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Comments are closed.