ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಪುತ್ರ ಯತೀಂದ್ರ ಪ್ರವಾಸ

ಮೈಸೂರು: ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಪ್ರವಾಸ ಆರಂಭಿಸಿದ್ದಾರೆ. ಚಾಮುಂಡಿ ಬೆಟ್ಟದಲ್ಲಿಂದು ನಾಡಿನ ಅದಿದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದು, ಬಳಿಕ ಕಾರ್ಯಕರ್ತರ ಜೊತೆ ಕೆಲಕಾಲ ಮಾತುಕತೆ ನಡೆಸಿದ್ದಾರೆ. 2018ರ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ತಂದೆ ಸ್ಪರ್ಧಿಸಲಿರುವ ಕ್ಷೇತ್ರದ ಮತದಾರರನ್ನು ಭೇಟಿ ಮಾಡಲು ಪ್ರವಾಸ ಕೈಗೊಂಡಿರುವುದಾಗಿ ಮೂಲಗಳು ಹೇಳಿವೆ.

Comments are closed.

Social Media Auto Publish Powered By : XYZScripts.com