ಹುಬ್ಬಳ್ಳಿ : ಸಾಲಬಾಧೆ ತಾಳದೆ ನೇಣು ಬಿಗಿದುಕೊಂಡು ರೈತನ ಆತ್ಮಹತ್ಯೆ

ಹುಬ್ಬಳ್ಳಿ : ಸಾಲಬಾಧೆಯಿಂದ ಬೇಸತ್ತು ರೈತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ಧಾನೆ. ಕುಂದಗೋಳ ತಾಲೂಕಿನ ನೆಲಗುಡ್ಡ ಗ್ರಾಮದಲ್ಲಿ ಘಟನೆ ನಡೆದಿದೆ. ಆರು ಏಕರೆ ಜಮೀನು ಹೊಂದಿದ್ದ ರೈತ ರಾಯನಗೌಡ ಪಾಟೀಲ್ (೪೫) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸರಿಯಾಗಿ ಬೆಳೆಬಾರದ ಹಿನ್ನೆಲೆಯಲ್ಲಿ ಜಮೀನಿನಲ್ಲಿಯೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಯನಗೌಡ ವಿವಿಧ ಬ್ಯಾಂಕುಗಳಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದರು ಎನ್ನಲಾಗುತ್ತಿದೆ. ಕುಂದಗೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.

Social Media Auto Publish Powered By : XYZScripts.com