ಮೈಸೂರು : ನೇಣು ಬಿಗಿದುಕೊಂಡು ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ..

ಮೈಸೂರು : ಇಂಜಿನಿಯರಿಂಗ್ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಸಂಯಮಿ ಗೌಡ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಮೈಸೂರಿನ ಶ್ರೀರಾಂಪುರ ಸಮೀಪದ ಬೆಮೆಲ್ ಬಡಾವಣೆಯ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಂಯಮಿ ಮೈಸೂರಿನ ಜಿಎಸ್ಎಸ್ಎಸ್ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಓದುತ್ತಿದ್ದಳು ಎಂದು ತಿಳಿದು ಬಂದಿದೆ. ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.

Social Media Auto Publish Powered By : XYZScripts.com