ಮಂಗಳೂರು : ಕಂಬಳ ತಿದ್ದುಪಡಿ ವಿಧೇಯಕಕ್ಕೆ ರಾಷ್ಟ್ರಪತಿ ಅಂಕಿತ, ಸಿಹಿ ಹಂಚಿ ಸಂಭ್ರಮಾಚರಣೆ

ಮಂಗಳೂರು : ಕಂಬಳ ತಿ‌ದ್ದುಪಡಿ ವಿಧೇಯಕಕ್ಕೆ ರಾಷ್ಟ್ರಪತಿ ಅಂಕಿತ ಹಾಕಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಜಿಲ್ಲಾ ಕಂಬಳ ಸಮಿತಿ ಪದಾಧಿಕಾರಿಗಳು ವಿಜಯೋತ್ಸವ ಆಚರಿಸಿದರು. ನಗರದ ಬಳ್ಳಾಲ್ ಬಾಗ್ ಜಂಕ್ಷನ್ ಬಳಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಕಂಬಳ ಸಮಿತಿ ಹೋರಾಟಗಾರರು ಸಂಭ್ರಮಿಸಿದರು.

ಈ ವೇಳೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕಂಬಳ ಸಮಿತಿ ಅಧ್ಯಕ್ಷ ಬಾರ್ಕೂರು ಶಾಂತರಾಮ್ ಶೆಟ್ಟಿ, ಕಂಬಳ ತಿದ್ದುಪಡಿ ವಿಧೇಯಕಕ್ಕೆ ರಾಷ್ಟ್ರಪತಿಗಳ ಅಂಕಿತ ಬಿದ್ದಿದ್ದು, ಸುಗ್ರೀವಾಜ್ನೆ ಮೂಲಕ ಕಂಬಳ ನಡೆಸಲು ಆದೇಶ ಹೊರಬಿದ್ದಿದೆ. ಮುಂದಿನ ಚಳಿಗಾಲದ ಅಧಿವೇಶನದ ವೇಳೆ ರಾಜ್ಯ ಸರಕಾರವು ವಿಧೇಯಕವನ್ನ ಮಂಡಿಸಲಿದೆ ಎಂದರು. ಸಾರ್ವಜನಿಕರಿಗೆ ಸಿಹಿ ಹಂಚಿ ಹರ್ಷ ವ್ಯಕ್ತಪಡಿಸಿದರು.  ಅಲ್ಲದೇ ಕಂಬಳ ಹೋರಾಟಕ್ಕೆ ಬೆಂಬಲ ಸೂಚಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

 

Comments are closed.

Social Media Auto Publish Powered By : XYZScripts.com