ಮುತಾಲಿಕ್‌ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿದ ಪೊಲೀಸರು

ಬೆಂಗಳೂರು: ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿರುದ್ದ ಹೈಗ್ರೌಂಡ್‌ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ನಡೆದ ಇಫ್ತಾರ್‌ ಕೂಟ ವಿರೋಧಿಸಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ನಮ್ಮ ರಕ್ತ ಚೆಲ್ಲಿದರೂ ಚಿಂತೆಯಿಲ್ಲ ಇನ್ನು ಮುಂದೆ ದೇವಸ್ಥಾನದಲ್ಲಿ ಇಫ್ತಾರ್ ಕೂಟ ನಡೆಸಲು ಬಿಡುವುದಿಲ್ಲ ಎಂದಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

Comments are closed.

Social Media Auto Publish Powered By : XYZScripts.com